ಬೆಂಗಳೂರು | ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ಧರಣಿ

Date:

  • ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗೆ ಸರ್ಕಾರ ಒತ್ತು ನೀಡಬೇಕು
  • ಬೈಕ್​ ಸುಡುವುದಾಗಿ ಬೆದರಿಕೆ ಹಾಕಿದ್ದ ಒರ್ವ ಆಟೋ ಚಾಲಕ

ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ನೇತೃತ್ವದಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ, ಸೋಮವಾರ ನಗರದ ಪ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಈ ಬಗ್ಗೆ ಸರ್ಕಾರ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಸಾವಿರಾರು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನಲ್ಲಿ ನಿರಂತರವಾಗಿ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ಹಲ್ಲೆ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ವಿಡಿಯೋಗಳು ವೈರಲ್ ಆಗಿವೆ. ಕೆಲವು ದಿನಗಳ ಹಿಂದೆ, ಒರ್ವ ಆಟೋ ಚಾಲಕ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಬೈಕ್ ಚಾಲಕನ ಹೆಲ್ಮೆಟ್ ಅನ್ನು ಒಡೆದು ಹಾಕಿದ್ದ ಘಟನೆ ನಡೆದಿತ್ತು. ಇಂದಿರಾನಗರ ಮೆಟ್ರೊ ನಿಲ್ದಾಣದ ಬಳಿ ಒರ್ವ ವಿದೇಶಿ ಯುವಕನ ಮೊಬೈಲ್ ಅನ್ನು ಆಟೋ ಚಾಲಕ ಒಡೆದು ಹಾಕಿ. ಆತನ ಮೇಲೆ ಕೈ ಮಾಡಲು ಮುಂದಾಗಿದ್ದನು. ಬೈಕ್​​ ಟ್ಯಾಕ್ಸಿ ರೈಡರ್ ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ವಾಹನವನ್ನು ಬಳಸಿದ್ದಕ್ಕಾಗಿ ಆತನನ್ನು ಅವಾಚ್ಯವಾಗಿ ನಿಂದಿಸಿದಲ್ಲದೇ, ಬೈಕ್​ ಸುಡುವುದಾಗಿ ಬೆದರಿಕೆ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಹೀಗೆ ನಗರದಲ್ಲಿ ಬೈಕ್​​ ಟ್ಯಾಕ್ಸಿ ರೈಡರ್​ಗಳ ಮೇಲೆ ಆಟೋ ಚಾಲಕರು ಪದೇ ಪದೇ ಕಿರುಕುಳ ನೀಡುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ಈ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷತಾ ಕ್ರಮಕ್ಕೆ ಆಗ್ರಹಿಸಿ ಬೈಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟೋ ಚಾಲಕರು ತಮ್ಮ ಸಮಸ್ಯೆಗೆ ಸಾರಿಗೆ ಇಲಾಖೆ ಜೊತೆ ಹಾಗೂ ಸರ್ಕಾರದ ಜೊತೆ ಮಾತಾಡಿ ಪರಿಹರಿಸಿಕೊಳ್ಳಡಬೇಕು. ಆದರೆ, ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ದೌರ್ಜನ್ಯ ಮಾಡಿದರೆ ಏನು ಪ್ರಯೋಜನ ಎಂದು ಬೈಕ್ ಟ್ಯಾಕ್ಸಿ ಚಾಲಕರು ಪ್ರಶ್ನಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...