ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

Date:

  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ
  • ಮಧ್ಯಾಹ್ನ 12.30 ಗಂಟೆಯಿಂದ ರಾತ್ರಿ 9ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಏ. 15ರಂದು (ಇಂದು) ಮಧ್ಯಾಹ್ನ 12.30 ಗಂಟೆಯಿಂದ ರಾತ್ರಿ 9ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳು

ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ.ರಸ್ತೆ ಯಿಂದ ಕಬ್ಬನ್‌ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲ ರಸ್ತೆ ವಿಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿಷೇಧಿಸಲಾಗಿದೆ.

ಸಂಚಾರ ಮಾರ್ಪಾಡು

ಯಾವುದೇ ಮಾದರಿಯ ಗೂಡ್ಸ್ ವಾಹನಗಳು ಕ್ವೀನ್ಸ್ ರಸ್ತೆಯಲ್ಲಿ ಸಂಚರಿಸುವಂತಿಲ್ಲ. ಸಿದ್ದಲಿಂಗಯ್ಯ ಸರ್ಕಲ್‌ ಕಡೆಯಿಂದ ಎಂ.ಜಿ ರಸ್ತೆಗೆ ಹೋಗಲು ಬಯಸುವ ಗೂಡ್ಸ್‌ ವಾಹನಗಳು ರೆಸಿಡೆನ್ಸಿ ರಸ್ತೆಯ ಮೂಲಕ ಸಂಚರಿಸಬಹುದು.

ಸಿದ್ದಲಿಂಗಯ್ಯ ಸರ್ಕಲ್ ಕಡೆಯಿಂದ ಎಂ.ಜಿ ರಸ್ತೆಗೆ ಹೋಗಲು ಬಯಸುವ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳನ್ನು ರೆಸಿಡೆನ್ಸಿ ರಸ್ತೆಯ ಮೂಲಕ ಎಂಜಿ ರಸ್ತೆಗೆ ಕಡೆಗೆ ಸಂಚರಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ತಲೆಮಾರಿಗೆ ಹಳೆಯ ನೆನಪು 4 | ಸಿಹಿ ನೀರಿನ ಕಣಜ ಅಕ್ಕಿತಿಮ್ಮನಹಳ್ಳಿ ಕೆರೆ ಮೇಲಿದೆ ‘ಹಾಕಿ ಕ್ರೀಡಾಂಗಣ’

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು (ಸ್ಥಳ ಲಭ್ಯತೆಯ ಮೇಲೆ)

ಕಿಂಗ್ಸ್ ರಸ್ತೆ, ಬಿಆರ್‌ಎ ಮೈದಾನ ಮೇಟ್ರೋ ಲೇನ್ ಕೆಳಗೆ, ಕಂಠೀರವ ಸ್ಟೇಡಿಯಂ ಯು.ಬಿ.ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ. ಬಿಲ್ಡಿಂಗ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದ್ದು, ಸಾರ್ವಜನಿಕರು ಸಹಕರಿಸಲು ನಗರ ಸಂಚಾರ ಪೊಲೀಸ್‌ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ | ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದ ಕರವೇ ಮಹಿಳಾ ಹೋರಾಟಗಾರರು

"ರಾಜ್ಯದ ಜನತೆಯಿಂದ ಆಯ್ಕೆಯಾಗಿ ದೆಹಲಿಗೆ ಹೋದ 28 ಸಂಸದರು ತಾವು ಕರ್ನಾಟಕದ...

ಕರ್ನಾಟಕ ಬಂದ್ | ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು...

ಬೆಂಗಳೂರು | ಸಾಲು ಸಾಲು ರಜೆ; ಮೂರು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ ಜನ

ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ಕೆಲಸ ಅರಸಿ ಬಂದು ನಗರದಲ್ಲಿರುವ...

ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ; ಬಿಜೆಪಿ ಕಾರ್ಯಕರ್ತರ ಬಂಧನ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ಹಲವಾರು...