ಬೆಂಗಳೂರು | ಕುಡಿಯುವ ನೀರನ್ನು ಈ ಚಟುವಟಿಕೆಗಳಿಗೆ ಬಳಸಿದರೆ 5,000 ರೂ. ದಂಡ

Date:

ಕಳೆದ ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಬೆಂಗಳೂರು ನಗರವು ಪರದಾಡುವಂತೆ ಮಾಡಿತ್ತು. ಈಗ, ಈ ವರ್ಷದ ಬೇಸಿಕೆ ಎದುರಾಗುತ್ತಿದೆ. ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಎದುರಾಗದಂತೆ ಎಚ್ಚರಿಕೆ ಹವಿಸಲು, ಕುಡಿಯುವ ನೀರಿನ ವ್ಯರ್ಥ ಬಳಕೆಯನ್ನು ತಡೆಯಲು ಜಲಮಂಡಳಿ ಮುಂದಾಗಿದೆ. ಕುಡಿಯುವ ನೀರನ್ನು ವ್ಯರ್ಥ ಮಾಡುವವರಿಗೆ ದಂಡ ವಿಧಿಸುವುದಾಗಿ ಘೊಷಿಸಿದೆ.

- Advertisement -

ಕಾರು ತೊಳೆಯುವುದು, ತೋಟಗಾರಿಕೆ ಸೇರಿದಂತೆ ಇತರ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸಿದರೆ 5,000 ರೂ. ದಂಡ ವಿಧಿಸಲಾಗುವುದು ಎಂದು ಜಲ ಮಂಡಳಿ ತಿಳಿಸಿದೆ. ಪದೇ-ಪದೇ ತಪ್ಪು ಮಾಡಿದರೆ, ಹೆಚ್ಚುವರಿ ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಬಗ್ಗೆ ಪ್ರಕಟಣೆ ನೀಡಿರುವ ಜಲಮಂಡಳಿ, “ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಹನ ತೊಳೆಯುವುದು, ತೋಟಗಾರಿಕೆ, ನಿರ್ಮಾಣ, ಅಲಂಕಾರಿಕ ಉದ್ಯಾನ, ಮನರಂಜನಾ ಉದ್ದೇಶಗಳು, ರಸ್ತೆ ನಿರ್ಮಾಣ, ಶುಚಿತ್ವ ಕೆಲಸಗಳು ಹಾಗೂ ಸಿನೆಮಾ ಹಾಲ್‌ಗಳು ಮತ್ತು ಮಾಲ್‌ಗಳಲ್ಲಿ ಇತರ ಯಾವುದೇ ಉದ್ದೇಶಕ್ಕೆ ಕುಡಿಯುವ ನೀರನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಹೇಳಿದೆ.

“ನಿಯಮವನ್ನು ಉಲ್ಲಂಘಿಸುವವರಿಗೆ ಜಲಮಂಡಳಿ ಕಾಯ್ದೆಯ ಸೆಕ್ಷನ್ 109ರ ಅಡಿಯಲ್ಲಿ 5,000 ರೂ. ದಂಡ ವಿಧಿಸಲಾಗುವುದು. ಪುನರಾವರ್ತಿತ ಅಪರಾಧಗಳಿಗೆ 5,000 ರೂ. ಜೊತೆಗೆ ಹೆಚ್ಚುವರಿಯಾಗಿ ದಿನಕ್ಕೆ 500 ರೂ. ದಂಡ ವಿಧಿಸಲಾಗುವುದು. ನಿಯಮವನ್ನು ಉಲ್ಲಂಘಿಸುವುದು ಕಂಡುಬಂದರೆ ನಿವಾಸಿಗಳು ಕಾಲ್‌ಸೆಂಟರ್ ಸಂಖ್ಯೆ 1916ಕ್ಕೆ ಕರೆಮಾಡುವಂತೆ” ಎಂದು ಜಲಮಂಡಳಿ ಕೋರಿದೆ.

ತಾಪಮಾನ ಏರಿಕೆ ಮತ್ತು ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಈಗಾಗಲೇ ಗಮನಾರ್ಹವಾಗಿ ಕುಸಿದಿವೆ. ಹೀಗಾಗಿ, ಮುಂಬರುವ ತಿಂಗಳುಗಳಲ್ಲಿ ನೀರಿನ ಕೊರತೆಯ ಸಾಧ್ಯತೆಯ ಬಗ್ಗೆ ಎಚ್ಚರಿಸಿವೆ ತಜ್ಞರು ಎಚ್ಚರಿಸಿದ್ದಾರೆ ಎಂದು ಮಂಡಳಿ ತಿಳಿಸಿದೆ.

ಕಳೆದ ವರ್ಷ, ಸರಿಯಾಗಿ ಮಳೆಯಾಗದ ಪರಿಣಾಮ ಬೇಸಿಗೆಯಲ್ಲಿ ತೀವ್ರ ನೀರಿನ ಬಿಕ್ಕಟ್ಟನ್ನು ಎದುರಾಗಿತ್ತು. ಬೆಂಗಳೂರಿನ 14,000 ಬೋರ್‌ವೆಲ್‌ಗಳು ಒಣಗಿ ಹೋಗಿದ್ದವು. ದಿನಕ್ಕೆ 300-500 ದಶಲಕ್ಷ ಲೀಟರ್‌ ನೀರಿನ ಕೊರತೆಯನ್ನು ಎದುರಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...