ಬೆಂಗಳೂರು | ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ್‌ ಮಾರಾಟ; ಬಂಧನ

Date:

  • ಗಿಫ್ಟ್‌ ಬಾಕ್ಸ್‌ ಮುಖಾಂತರ ಡ್ರಗ್ಸ್‌ ಪ್ಯಾಕ್ ಮಾಡಿ ಗ್ರಾಹಕರಿಗೆ ಮಾರಾಟ
  • ಡ್ರಗ್ಸ್ ದಂಧೆ ಆರೋಪದ ಮೇಲೆ ವಿಮಾ ಕಂಪನಿಯ ಕಾರ್ಯನಿರ್ವಾಹಕನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ಅಶೋಕನಗರದ ಬಾಡಿಗೆ ಮನೆಯೊಂದರಲ್ಲಿ ಆರೋಪಿಗಳು ನೆಲೆಸಿದ್ದರು. ಆಫ್ರಿಕನ್ ಪ್ರಜೆಗಳಿಂದ ಡ್ರಗ್ಸ್ ಪಡೆದು ಗಿಫ್ಟ್‌ ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಿ ಗ್ರಾಹಕರಿಗೆ ತಲುಪಿಸುತ್ತಿದ್ದರು. ಮತ್ತೆ ಅದೇ ಗಿಫ್ಟ್‌ ಬಾಕ್ಸ್‌ ಮುಖಾಂತರ ಹಣ ಪಡೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಗರದಲ್ಲಿ ಈ ರೀತಿಯಾಗಿ ದಂಧೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

“ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 7 ಪೆಡ್ಲರ್‌ಗಳನ್ನು ಬಂಧಿಸಲಾಗಿದೆ” ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.

ಡ್ರಗ್ಸ್‌ ಆರೋಪಿಯ ಬಂಧನ

ವಿಮಾ ಕಂಪನಿಯ ಕಾರ್ಯನಿರ್ವಾಹಕನನ್ನು ಡ್ರಗ್ಸ್ ದಂಧೆ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಯು ವಿಶಾಖಪಟ್ಟಣಂದಿಂದ ಮಾದಕ ವಸ್ತಗಳನ್ನು ತರೆಸಿಕೊಳ್ಳುತ್ತಿದ್ದನು. ಕಾರಿನಲ್ಲಿ ಹ್ಯಾಶಿಶ್ ಆಯಿಲ್ ಸರಬರಾಜು ಮಾಡುತ್ತಿದ್ದನು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇವಸ್ಥಾನದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರನ್ನೇ ತಿರುಚಿದ ಪೊಲೀಸರು: ಆರೋಪ

19 ಮಂದಿ ಡ್ರಗ್ ಫೆಡ್ಲರ್‌ಗಳ ಬಂಧನ

ಪೊಲೀಸರು ಡ್ರಗ್ಸ್‌ ದಂಧೆ ನಡೆಸುವವರ ವಿರುದ್ಧ ಕಳೆದ ಹಲವು ತಿಂಗಳಿನಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ 19 ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ 10 ಪೆಡ್ಲರ್‌ಗಳು ಕೇರಳದವರಾಗಿದ್ದು, ಇಬ್ಬರು ನೈಜೀರಿಯಾ ಮತ್ತು 5 ಜನ ಕೋಸ್ಟ್‌ನವರಾಗಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ರಾಜ್ಯದ ತಲಾ ಒಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಅಧಿಕಾರಿಗಳು ₹7.06 ಕೋಟಿ ಮೌಲ್ಯದ 6 ಕೆಜಿ ಡ್ರಗ್ಸ್, ಹ್ಯಾಶಿಶ್ ಆಯಿಲ್, 51.8 ಕೆಜಿ ಗಾಂಜಾ, 140 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳು, 236 ಎಕ್‌ಸ್ಟಸಿ ಮಾತ್ರೆಗಳು, 34 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 23 ಗ್ರಾಂ ಕೊಕೇನ್​​ ಅನ್ನು ವಶಪಡಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...