ಬೆಂಗಳೂರು | ಶಾಲೆ-ಕಾಲೇಜು ಬಳಿಯ ಅಂಗಡಿಗಳಲ್ಲಿ ಡ್ರಗ್ಸ್‌ ಮಾರಾಟ: ಬಂಧನ

Date:

  • 18 ಮಂದಿ ಮಾದಕವಸ್ತು ವ್ಯಸನಿಗಳು ಹಾಗೂ 3 ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ
  • ಆರೋಪಿಗಳಿಂದ ಮಾದಕವಸ್ತು, ಹೈಡ್ರಾ ಮ್ಯಾಂಗೋ ಹಾಗೂ 2.5 ಕೆಜಿ ಗಾಂಜಾ ಜಪ್ತಿ

2023-24ರ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿವೆ. ಈ ಹಿನ್ನೆಲೆ, ಬೆಂಗಳೂರು ನಗರ ಪೊಲೀಸರು ಶಾಲಾ-ಕಾಲೇಜುಗಳಿಂದ ನೂರು ಮೀಟರ್ ವ್ಯಾಪ್ತಿಯ ಅಂಗಡಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.

ಬೇಸಿಗೆ ರಜೆಯ ನಂತರ ಮತ್ತೆ ತೆರೆದಿರುವ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಕೇಂದ್ರ ಮತ್ತು ಪಶ್ಚಿಮ ವಿಭಾಗದ ಪೊಲೀಸರು ಮಾದಕ ದ್ರವ್ಯ ದಂಧೆ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿ ವೇಳೆ ಅಂಗಡಿಗಳಲ್ಲಿ ಅಕ್ರಮವಾಗಿ ಮಾದಕವಸ್ತುಗಳು ಹಾಗೂ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿ ಪ್ರಕರಣ ದಾಖಲಿಸುತ್ತಿದ್ದಾರೆ.

“ಶಾಲಾ-ಕಾಲೇಜುಗಳ ಸುತ್ತಮುತ್ತ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿಯಲ್ಲಿ ಸುಮಾರು 21 ಪ್ರಕರಣಗಳನ್ನು ದಾಖಲಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ರೀನಿವಾಸ್ ಆರ್ ಗೌಡ ತಿಳಿಸಿದ್ದಾರೆ.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬುಧವಾರ ಬೆಳಗ್ಗೆಯಿಂದ ಗುರುವಾರ ಸಂಜೆಯವರೆಗೂ ಕೇಂದ್ರ ವಿಭಾಗದ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಶಾಲಾ-ಕಾಲೇಜುಗಳ ನೂರು ಮೀಟರ್‌ ವ್ಯಾಪ್ತಿಯಲ್ಲಿರುವ ಅಂಗಡಿಗಳ ಮೇಲೆ ದಾಳಿ ಮಾಡಿದ್ದು, ಈ ವೇಳೆ ಎನ್‌ಡಿಪಿಎಸ್‌ ಕಾಯ್ದೆಯಡಿ 21 ಪ್ರಕರಣ ದಾಖಲಿಸಲಾಗಿದೆ. 18 ಮಂದಿ ಮಾದಕವಸ್ತು ವ್ಯಸನಿಗಳು ಹಾಗೂ 3 ಮಂದಿ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 11 ಗ್ರಾಂ ಎಂಡಿಎಂ ಮಾದಕವಸ್ತು, 7 ಗ್ರಾಂ ಹೈಡ್ರಾ ಮ್ಯಾಂಗೋ ಹಾಗೂ 2.5 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಪಶ್ಚಿಮ ವಿಭಾಗದಲ್ಲಿ ಪೊಲೀಸರು ಎರಡು ದಿನಗಳ ಕಾಲ ಕಾರ್ಯಾಚರಣೆ ನಡೆಸಿ 164 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಪಶ್ಚಿಮ ವಿಭಾಗದ ಎಲ್ಲ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಿರುವ ಪೊಲೀಸರು ಒಟ್ಟು 164 ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ಮಾದಕವಸ್ತು ಸೇವನೆ ಆರೋಪದಡಿ ಐಪಿಸಿ ಸೆಕ್ಷನ್‌ 27 ಬಿ ಅಡಿ 154 ಪ್ರಕರಣ ದಾಖಲಿಸಿ, 154 ಜನರನ್ನು ಬಂಧಿಸಲಾಗಿದೆ. ಮಾದಕವಸ್ತು ಮಾರಾಟ ಆರೋಪದಡಿ 10 ಜನರನ್ನು ಬಂಧಿಸಿ 11 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ 10 ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಆಯುಕ್ತ ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...