ರಾಜ್ಯ ರಾಜಧಾನಿ ಬೆಂಗಳೂರಿನ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ತುಮಕೂರಿನೆಡೆಗೆ ಸಂಚರಿಸುತ್ತಿದ್ದ 2 ಕಾರು, 1 ಕೆಎಸ್‌ಆರ್‌ಟಿಸಿ ಬಸ್, 1 ಕ್ಯಾಂಟರ್ ಹಾಗೂ 1 ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ನೆಲಮಂಗಲ ತಾಲೂಕಿನ ಸೋಂಪುರದಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಗುರುವಾರ ಈ ಘಟನೆ ನಡೆದಿದೆ.
ಅತಿ ವೇಗದ ವಾಹನ ಚಾಲನೆ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಸರಣಿ ಅಪಘಾತ ನಡೆದ ಸಂದರ್ಭದಲ್ಲಿ ಸುಮಾರು 2 ಕಿ.ಮೀ.ವರೆಗೆ ವಾಹನದಟ್ಟಣೆ ಉಂಟಾಗಿತ್ತು.
ಈ ಸುದ್ದಿ ಓದಿದ್ದೀರಾ? ಸ್ವಚ್ಛ ಸರ್ವೇಕ್ಷಣ್-2023 | ಬೆಂಗಳೂರಿಗೆ ರಾಷ್ಟ್ರಮಟ್ಟದಲ್ಲಿ 125ನೇ ಸ್ಥಾನ
ಹೆದ್ದಾರಿ ಪೊಲೀಸರು ಮತ್ತು ದಾಬಸ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಸಂಚಾರ ದಟ್ಟಣೆಯಿದ್ದ ಹಿನ್ನೆಲೆ, ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.