ಬೆಂಗಳೂರು | ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ: 30 ಜನರಿಗೆ ಗಾಯ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

- Advertisement -

ಮುಂಜಾನೆ ವೇಳೆ ಮಂಜು ಹೆಚ್ಚಾಗಿದ್ದರಿಂದ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್‌ಗಳಿಗೆ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ನಿಂತಿದ್ದ ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ಇದನ್ನು ಕಂಡ ಹಿಂದೆ ಬರುತ್ತಿದ್ದ ದುರ್ಗಾಂಬಾ ಬಸ್ ಚಾಲಕ ಬಸ್​​ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ, ಹಿಂದೆ ಬರುತ್ತಿದ್ದ ಶಿವಗಂಗಾ ಬಸ್‌ಗೆ ಡಿಕ್ಕಿ ಹೊಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಕುರಿತು ಕರವೇ ಬೃಹತ್ ರ‍್ಯಾಲಿ, ಸಂಚಾರ ಅಸ್ತವ್ಯಸ್ತ

ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್​​ಗಳ ಮುಖಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್​ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.

ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...