ಬೆಂಗಳೂರು | ಸಿಲಿಂಡರ್ ಸ್ಪೋಟಗೊಂಡು ಏಳು ಜನರಿಗೆ ಗಂಭೀರ ಗಾಯ

Date:

ಸಿಲಿಂಡರ್ ಸ್ಪೋಟಗೊಂಡು ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಎಲ್‌ಬಿಎಸ್‌ ಲೇಔಟ್‌ನಲ್ಲಿ ನಡೆದಿದೆ.

- Advertisement -

ಅಫ್ರೋಜ್, ಪಸಿಯಾ ಭಾನು, ಹಸ್ಮಾ, ಶಾಹಿದ್ ಸೇರಿದಂತೆ ಆರು ಜನರಿಗೆ ಗಾಯಗಳಾಗಿದ್ದು, ಈ ಪೈಕಿ ಪಸಿಯಾ ಭಾನು ಮತ್ತು ಹಸ್ಮಾ ಇಬ್ಬರ ಸ್ಥಿತಿ ಗಂಭೀರವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ದೆಹಲಿ ಮೂಲದ ಹಸ್ಮಾ ಬಾನು ಎಂಬುವವರು ಮನೆ ಕೆಲಸ ಮಾಡಿಕೊಂಡು ಬೆಂಗಳೂರು ಎಲ್‌ಬಿಎಸ್‌ ಲೇಔಟ್‌ನಲ್ಲಿ ವಾಸವಾಗಿದ್ದಾರೆ. ಇವರ ಮನೆಯ ಸಿಲಿಂಡರ್‌ ಸ್ಟೋಟಗೊಂಡು ಅಕ್ಕಪಕ್ಕದ ಐದು ಮನೆಗಳಿಗೆ ಹಾನಿಯಾಗಿದೆ. ಜತೆಗೆ, ಮನೆಯಲ್ಲಿದ್ದ ಒಟ್ಟು ಏಳು ಮಂದಿಗೆ ಗಂಭೀರ ಗಾಯವಾಗಿದ್ದು, ಎಲ್ಲ ಗಾಯಾಳುಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ದೆಹಲಿ ಮೂಲದ ಹಸ್ಮಾ ಬಾನು ಎಂಬುವವರ ಮನೆಯಲ್ಲಿ ರಾತ್ರಿ ಗ್ಯಾಸ್ ಸೋರಿಕೆಯಾಗಿದ್ದು, ಮನೆಯ ಎಲ್ಲ ಕಿಟಕಿ ಬಾಗಿಲು ಬಂದ್‌ ಮಾಡಿದ್ದರಿಂದ ಸೋರಿಕೆಯಾದ ಅನಿಲ ಹೊರಗೆ ಹೋಗಲು ಆಗಿಲ್ಲ. ಮನೆಗಳು ಚಿಕ್ಕ ಚಿಕ್ಕದಾಗಿರುವ ಕಾರಣಕ್ಕೆ ಎಲ್ಲೆಡೆ ಗ್ಯಾಸ್‌ ಅನಿಲ ಸೇರಿಕೊಂಡಿದೆ. ಎಲ್ಲ ಕಿಟಕಿಗಳು ಬಂದ್ ಆಗಿದ್ದರಿಂದ ಬೆಳಗ್ಗೆ ಎದ್ದಾಗ ಮಹಿಳೆ ಮನೆಯಲ್ಲಿ ಲೈಟ್‌ ಹಾಕಲು ಸ್ವಿಚ್ ಹಾಕಿದಾಗ ಲೈಟ್‌ ಬಂದಿದ್ದರಿಂದ ತಕ್ಷಣವೇ ಇಡೀ ಮನೆ ಸ್ಪೋಟಗೊಂಡಿರಬಹುದು. ಇನ್ನು ಮನೆಗಳ ಗೋಡೆಗಳು ಒಂದಕ್ಕೊಂದು ಅಟ್ಯಾಚ್ ಆಗಿರುವುದರಿಂದ ಹಾನಿಯ ಪ್ರಮಾಣ ಐದು ಮನೆಗಳಿಗೆ ವ್ಯಾಪಿಸಿದೆ. ಇದೇ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ.

ಈ ಘಟನೆಯಲ್ಲಿ ಇಬ್ಬರ ದೇಹದ ಭಾಗಗಳು ಬಹುತೇಕ ಸುಟ್ಟುಹೋಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಡ್ಯೂಟಿ, ರಜೆ ನೀಡಲು ಒಂದೂವರೆ ಕೋಟಿ ರೂ. ಲಂಚ ಪಡೆದಿದ್ದ 7 ಅಧಿಕಾರಿಗಳ ಅಮಾನತು

“ಬೆಳಗ್ಗೆ 7.10ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಮ್ಮ ಅಮ್ಮ ಮೊದಲ ಮಹಡಿಯಲ್ಲಿ ಇದ್ದರು. ನಾವು ಮತ್ತು ನಮ್ಮ ತಂದೆ ಕೆಳಗೆ ಇದ್ದೆವು. ಈ‌ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ. ಆದರೆ, ಪಕ್ಕದಲ್ಲಿ ದೆಹಲಿ ಮೂಲದ ಮಹಿಳೆ ವಾಸವಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಈ‌ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ. ನನಗೆ ಕರೆಂಟ್ ಹೊಡೆದು ಬಿದ್ದುಹೋಗಿದ್ದೆ. ಆಸ್ಪತ್ರೆಗೆ ಸೇರಿಸಲು ನನ್ನನ್ನು ಕರೆತಂದಿದ್ದಾರೆ. ಒಟ್ಟು ಐದು ಮನೆಗೆ ಹಾನಿ ಆಗಿದೆ. ಏಳು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ಗಾಯಾಳು ಅಫ್ರೋಜ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...