ಬೆಂಗಳೂರು | ದೇವಸ್ಥಾನದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರನ್ನೇ ತಿರುಚಿದ ಪೊಲೀಸರು: ಆರೋಪ

Date:

  • ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್‌ ಗೋವಿಂದ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ
  • ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಜನಸಂದಣಿಯನ್ನೇ ನೆಪವಾಗಿಟ್ಟುಕೊಂಡು ಕಾಮುಕನೊಬ್ಬ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ದೂರನ್ನೇ ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

ಭಾನುವಾರ ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆ ಬಳಿಯಿರುವ ಇಸ್ಕಾನ್ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಉತ್ತರ ನಿವಾಸಿಯಾಗಿರುವ ಸುಮಾ (ಹೆಸರು ಬದಲಿಸಲಾಗಿದೆ) ಪ್ರತಿ ಭಾನುವಾರ ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ಅದೇ ರೀತಿ ಮೇ 7 ರಂದು ಆಕೆ ತನ್ನ ಇಬ್ಬರು ಸ್ನೇಹಿತೆಯರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಾರೆ. ಆಗ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಅಂದು ಬೆಳಗ್ಗೆ 7:10ರ ಸುಮಾರಿಗೆ ದೇವರ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದೆ. ಈ ವೇಳೆ, ಹಿಂದಿನಿಂದ ಯಾರೋ ನನ್ನನ್ನು ಮುಟ್ಟುತ್ತಿರುವಂತೆ ಭಾಸವಾಯಿತು. ಜನಸಂದಣಿಯಿಂದಾಗಿ ಹೀಗೆ ಆಗಿರಬಹುದು. ಹಿಂದೆ ಮಹಿಳೆ ನಿಂತಿರಬೇಕು ಎಂದು ಸುಮ್ಮನಾದೆ. ಆದರೆ, ಪದೇಪದೆ ಇದು ಮುಂದುವರೆಯಿತು. ತಿರುಗಿ ನೋಡಿದರೆ, ಹಿಂದೆ ನಿಂತಿದ್ದ ವ್ಯಕ್ತಿಯೊಬ್ಬ ನನ್ನ ಸೊಂಟ ಹಿಡಿದು ತಬ್ಬಿಕೊಳ್ಳಲು ಪ್ರಯತ್ನಿಸುತ್ತಿದ್ದ, ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ” ಎಂದು ಯುವತಿ ಆರೋಪಿಸಿದ್ದಾರೆ.

“ಆತನಿಗೆ 40 ವರ್ಷ ವಯಸ್ಸಾಗಿರಬಹುದು. ಈ ಘಟನೆಯಿಂದ ನನಗೆ ಆಘಾತವಾಯಿತು. ಏನು ಮಾಡಬೇಕೆಂದು ತಿಳಿಯಲಿಲ್ಲ. ಎಚ್ಚೆತ್ತುಕೊಂಡು ಆ ವ್ಯಕ್ತಿಯನ್ನು ಹಿಡಿಯಲು ಪ್ರಯತ್ನಿಸಿದೆ. ದೇವರ ದರ್ಶನ ಮುಗಿಸಿ ಆತನನ್ನು ಹಿಡಿಯಲು ಕಾಯುತ್ತಿದ್ದೆ. ಆದರೆ, ಬಹಳ ಹೊತ್ತಾದರೂ ಆತ ಹೊರಗಡೆ ಬರಲಿಲ್ಲ. ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದೆವು. ಆತ ಭಯಗೊಂಡು ಹಿಂಬಾಗಿಲಿನಿಂದ ಪರಾರಿಯಾಗಿರುವುದು ಕಂಡುಬಂದಿದೆ” ಎಂದು ವಿವರಿಸಿದ್ದಾರೆ.

ಘಟನೆಯನ್ನು ಜನಪದ ನರ್ತಕಿಯೊಬ್ಬರು ಕಣ್ಣಾರೆ ಕಂಡಿದ್ದು, ದೂರು ದಾಖಲಿಸುವಂತೆ ಸುಮಾ ಅವರಿಗೆ ಹೇಳಿದ್ದಾರೆ. ಬಳಿಕ ಅವರ ಸಲಹೆಯಂತೆ ಯುವತಿ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರು ಯುವತಿಯೊಂದಿಗೆ ದೇವಸ್ಥಾನಕ್ಕೆ ತೆರಳಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಳಿಕ ತಮಗೆ ಬೇರೆ ಕೆಲಸ ಇದೆ ಎಂದು ಯುವತಿಗೆ ಹೇಳಿ ಹೊರಟು ಹೋಗಿದ್ದಾರೆ. ನಂತರ ಯುವತಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಮತ್ತೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

“ಲೈಂಗಿಕ ಕಿರುಕುಳ ಎಂದು ಹೇಳಿದಾಗ ಪೊಲೀಸ್ ಅಧಿಕಾರಿಯೊಬ್ಬರು ನನ್ನನ್ನು ನೋಡಿ ನಕ್ಕರು. ನನಗೆ ನೀಡಿರುವುದು ಲೈಂಗಿಕ ಕಿರುಕುಳ ಎಂದು ಸುಮಾರು ಎರಡು ಗಂಟೆಗಳ ಕಾಲ ಮಹಿಳಾ ಕಾನ್ಸ್‌ಟೇಬಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ವಿವರಿಸಿದೆ. ದೂರು ನೀಡುವಾಗ ಲೈಂಗಿಕ ಕಿರುಕುಳವನ್ನು ಉಲ್ಲೇಖಿಸಬೇಡಿ ಮತ್ತು ಅದನ್ನು ದುರ್ವರ್ತನೆ ಎಂದು ದೂರು ಕೊಡಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು” ಎಂದು ಸುಮಾ ಆರೋಪಿಸಿದ್ದಾರೆ.

“ನನ್ನ ಬಳಿ ಸಿಸಿಟಿವಿ ದೃಶ್ಯಾವಳಿಗಳು ಸಾಕ್ಷಿಯಾಗಿವೆ. ನಾನು ಅದನ್ನು ದೂರಿನ ಜೊತೆಗೆ ಪೊಲೀಸರಿಗೆ ಹಸ್ತಾಂತರಿಸುತ್ತಿದ್ದೇನೆ ಎಂದು ನಾನು ದೂರಿನಲ್ಲಿ ಉಲ್ಲೇಖಿಸಿದ್ದೇನೆ. ಆದರೆ, ಪೊಲೀಸ್ ಅಧಿಕಾರಿ ಅದನ್ನು ವೈಟರ್ ನಿಂದ ಅಳಿಸಿಹಾಕಿ ಕೇವಲ ‘ಕ್ರಮ ಕೈಗೊಳ್ಳಲು ವಿನಂತಿಸಿ’ ಎಂದು ಬರೆಸಿದರು. ಪೊಲೀಸರು ಎಫ್ಐಆರ್ ದಾಖಲಿಸಿದಾಗ ನನಗೆ ಕರೆ ಮಾಡುವುದಾಗಿ ಹೇಳಿದ್ದಾರೆ” ಎಂದು ಯುವತಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ | ಕೆಎಸ್‌ಆರ್‌ಟಿಸಿಗೆ 350 ಬಸ್‌ ಬಾಡಿಗೆ ನೀಡಿದ ಬಿಎಂಟಿಸಿ; ಬೆಂಗಳೂರಿನಲ್ಲಿ ಸೇವೆಯಲ್ಲಿ ವ್ಯತ್ಯಯ

“ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...