ಬೆಂಗಳೂರು | 56 ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ಕದ್ದಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

Date:

ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಿಂದ 56 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಕದ್ದಿದ್ದ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಸೈಬರ್ ಕ್ರೈಂ ಘಟಕ ಬಂಧಿಸಿದೆ. ಆರೋಪಿಯನ್ನು ಮಂಗಳವಾರ ಬಂಧಿಸಿರುವುದಾಗಿ ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

ಬಂಧಿತ ಆರೋಪಿಯನ್ನು ಹರಿಯಾಣ ಮೂಲದ ಶುಭಾಂಗ್ ಜೈನ್ ಎಂದು ಗುರುತಿಸಲಾಗಿದೆ. ಆರೋಪಿಯು ಸೈಫರ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸಾಫ್ಟ್‌ವೇರ್ ಡೆವಲಪರ್ ಆಗಿ ಕೆಲಸ ಮಾಡುತ್ತಿದ್ದ. ಎಲ್ಲ ಕಂಪನಿಗಳ ವ್ಯಾಲೆಟ್‌ ಪ್ರವೇಶ ಮತ್ತು ನಿಯಂತ್ರಣವನ್ನು ಹೊಂದಿದ್ದ ಆರೋಪಿ, ಆ ಕಂಪನಿಗಳ ಕ್ರಿಪ್ಟೋಕರೆನ್ಸಿಗಳನ್ನು ತನ್ನ ಖಾಸಗಿ ವ್ಯಾಲೆಟ್‌ಗೆ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಆರೋಪಿ ಜೈನ್ 2021ರ ಮೇ ಮತ್ತು 2022ರ ಏಪ್ರಿಲ್‌ ನಡುವೆ ಸೈಫರ್ ಟೆಕ್ನಾಲಜೀಸ್‌ನಲ್ಲಿ ಕೆಲಸ ಮಾಡಿದರು. ಮಾರುಕಟ್ಟೆ ವಿಶ್ಲೇಷಣೆ ಮತ್ತು ಹಣಕಾಸು ವ್ಯವಹಾರ ವಿಭಾಗದಲ್ಲಿ ಆತ ವ್ಯವಹರಿಸಿದ್ದರು. ಆತನಿಗೆ ಕಂಪನಿಯ ವ್ಯಾಪಾರ ನಿರ್ವಹಣೆ ಲಾಗ್‌ಇನ್‌ ಮಾಹಿತಿಯನ್ನು ನೀಡಿತ್ತು. ಬಳಿಕ, ಕಂಪನಿಯ ಕ್ರಿಪ್ಟೋಕರೆನ್ಸಿಗಳು ಕಾಣೆಯಾಗಿರುವುದನ್ನು ಸಂಸ್ಥೆಯ ಮಾಲೀಕರು ಗಮನಿಸಿತ್ತು. ಕಂಪನಿಯ ಸಿಇಒ ಅಖಿಲ್ ಗುಪ್ತಾ ಅವರು 2022ರ ಏಪ್ರಿಲ್ 28ರಂದು ಸುಬ್ರಹ್ಮಣ್ಯನಗರ ಪೊಲೀಸರಿಗೆ ದೂರು ಸಲ್ಲಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಯ ಸೈಬರ್ ಕ್ರೈಂ ಘಟಕಕ್ಕೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ ಸೈಬರ್ ಘಟಕದ ತಂಡವು ಆರೋಪಿಯನ್ನು ಬಂಧಿಸಿದೆ. “ಆರೋಪಿ ಜೈನ್ ಅವರು ಕ್ರಿಪ್ಟೋಕರೆನ್ಸಿಗಳನ್ನು ತಮ್ಮ ಸಂಬಂಧಿಕರ ವ್ಯಾಲೆಟ್‌ಗಳಿಗೆ ವರ್ಗಾಯಿಸಿದ್ದರು. ನಂತರ ಹಣವನ್ನು ವಿತ್‌ಡ್ರಾ ಮಾಡಿಕೊಂಡಿದ್ದರು. ಅವರು ಐಷಾರಾಮಿ ಹೋಟೆಲ್‌ಗಳಲ್ಲಿ ವಾಸಿಸುತ್ತಿದ್ದರು. ಆತ ಸ್ಥಳದಿಂದ ಸ್ಥಳಕ್ಕೆ ತನ್ನ ವಾಸವನ್ನು ಬದಲಿಸುತ್ತಿದ್ದರು. ಹೀಗಾಗಿ, ಆತನ ಚಲನವಲನಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ತೊಡಕಾಗುತ್ತಿತ್ತು” ಎಂದು ತನಿಖಾ ತಂಡದ ಭಾಗವಾಗಿದ್ದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಟ್ರಸ್ಟ್ ಆಸ್ಪತ್ರೆಗಾಗಿ ಭೂಮಿ ಸ್ವಾಧೀನ: ವಿಜಯೇಂದ್ರ ವಿರುದ್ಧ ಆಯನೂರು ಆರೋಪ

2024ರ ಜುಲೈ 29ರಂದು ಪೊಲೀಸರು ಆತನ ಫೋನ್‌ ನಂಬರ್ ಪತ್ತೆ ಹಚ್ಚಿ, ಫೋನ್‌ ಕರೆಗಳ ಮಾಹಿತಿಯನ್ನು ಪರಿಶೀಲಿಸಿದಾಗ, ಆತನ ಹೆಚ್ಚಾಗಿ ಮನೆ ಬ್ರೋಕರ್‌ಗಳಿಗೆ ಕರೆ ಮಾಡಿರುವುದು ಕಂಡುಬಂದಿತ್ತು. ಆತನ ಫೋನ್‌ ಸ್ವಿಚ್‌ ಆಫ್‌ ಆಗಿದ್ದರಿಂದ,ಆತ ಫೋನ್‌ ಸ್ವಿಚ್ ಆನ್ ಮಾಡಲು ಪೊಲೀಸರು ಕಾಯುತ್ತಿದ್ದರು. ಆತ ಮತ್ತೆ ಫೋನ್ ಸ್ವಿಚ್ ಆನ್ ಮಾಡಲು ಒಂದು ತಿಂಗಳು ಸಮಯ ಹಿಡಿಯಿತು. ಇತ್ತೀಚೆಗೆ ಆತ ಫೋನ್‌ ಆನ್‌ ಮಾಡಿದ್ದು, ಮೊಬೈಲ್ ನೆಟ್‌ವರ್ಕ್‌ ಸಹಾಯದಿಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...