ಬೆಂಗಳೂರು | ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆಗೆ ಚೂರಿ ಇರಿದ ಅಳಿಯ

Date:

Advertisements
  • ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ಅಳಿಯನೊಬ್ಬ ಸ್ವಂತ ಅತ್ತೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ತನ್ನ ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆ ಜತೆಗೆ ಗಲಾಟೆಗೆ ಇಳಿದಿದ್ದ ಅಳಿಯ ಗಲಾಟೆ ನಡುವೆ ಚಾಕುವಿನಿಂದ ಇರಿದಿದ್ದಾನೆ. ಬುಧವಾರ ಈ ಘಟನೆ ನಡೆದಿದ್ದು, ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗೀತಾ ಅಳಿಯನಿಂದ ಹಲ್ಲೆಗೊಳಗಾದ ಮಹಿಳೆ. ಮನೋಜ್ ಬಂಧಿತ ವ್ಯಕ್ತಿ. ಆರೋಪಿಯೂ ಕಳೆದ ಮೂರು ವರ್ಷಗಳ ಹಿಂದೆ ವರ್ಷಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದನು. ತದನಂತರ ಗಂಡ ಕೆಲಸ ಮಾಡುತ್ತಿಲ್ಲ ಎಂದು ವರ್ಷಿತಾ ತವರು ಮನೆ ಸೇರಿದ್ದಳು. ಹಾಗಾಗಿ, ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ಮನೋಜ್ ಅತ್ತೆ ಮನೆಗೆ ಬಂದಿದ್ದನು.

Advertisements

ಈ ವೇಳೆ ಅತ್ತೆ ಮತ್ತು ಅಳಿಯನ ಮಧ್ಯೆ ಗಲಾಟೆ ನಡೆದಿದೆ. ಜಗಳದ ನಡುವೆಯೇ ಅತ್ತೆಗೆ ಅಳಿಯ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿನಿ ಸಾವು | ಬಸ್‌ ಚಾಲಕರಿಗೆ ನಿರ್ದೇಶನ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು | ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಸಾವು

ಬೆಂಗಳೂರಿನಲ್ಲಿ ಜೂನ್ 13ರಂದು ಭಾರೀ ಮಳೆಯಾಗಿದೆ. ನಗರದ ಕಾಡುಗೋಡಿ ಸಮೀಪದ ಚನ್ನಸಂದ್ರದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಓರ್ವ ರೈತ ಮತ್ತು ಹಸು ಮೃತಪಟ್ಟ ಘಟನೆ ನಡೆದಿದೆ.

ಚನ್ನಸಂದ್ರ ನಿವಾಸಿ ಕೃಷ್ಣಪ್ಪ (55) ಮೃತ ರೈತ. ರಾತ್ರಿ ಸುರಿದ ಮಳೆಗೆ ವಿದ್ಯುತ್ ವೈರ್ ಕಟ್ ಆಗಿ ಬಿದಿತ್ತು. ಜೂನ್ 14ರಂದು ಬೆಳಗ್ಗೆ ಮೇವಿಗೆಂದು ಕೃಷ್ಣಪ್ಪ ತನ್ನ ಹಸುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ, ವಿದ್ಯುತ್ ತಗುಲಿ ರೈತ ಮತ್ತು ಹಸು ಮೃತಪಟ್ಟಿದೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X