ತಮಿಳುನಾಡಿಗೆ ಸೇರಿದ ನಾಲ್ಕು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಬೆಂಗಳೂರಿನ ಸ್ಯಾಟ್ಲೈಟ್ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸೆ.11ರ ಮಧ್ಯರಾತ್ರಿ ತಮಿಳುನಾಡು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟವಾಗಿದೆ. ಈ ಬಗ್ಗೆ ತಮಿಳುನಾಡು ಬಸ್ ಚಾಲಕ ಗುಣಶೇಖರನ್ ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.