ಬೆಂಗಳೂರು | ಕೆರೆಗೆ ಕೊಳಚೆ ನೀರು ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ : ಸಚಿವ ಈಶ್ವರ ಖಂಡ್ರೆ

Date:

  • ಭವಿಷ್ಯದ ದೃಷ್ಟಿಯಿಂದ ಉಳಿದಿರುವ ಎಲ್ಲ ಕೆರೆಗಳ ಸಂರಕ್ಷಣೆ ನಮ್ಮ ಹೊಣೆ : ಸಚಿವ ಖಂಡ್ರೆ
  • ತ್ಯಾಜ್ಯ ಹರಿಸುವವರ ವಿರುದ್ಧ ಕ್ರಮಕೈಗೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ

“ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಕೊಳಚೆ ನೀರು ಹರಿಸುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಬೆಳ್ಳಂದೂರು ಕೆರೆ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, “ಪ್ರಸ್ತುತ 14 ತ್ಯಾಜ್ಯ ಜಲ ಸಂಸ್ಕರಣೆ ಘಟಕ (ಎಸ್.ಟಿ.ಪಿ.) ಕಾರ್ಯ ನಿರ್ವಹಿಸುತ್ತಿದ್ದು, ಇವುಗಳ ಸಾಮರ್ಥ್ಯ 560 ಎಂ.ಎಲ್.ಡಿ ಆಗಿದೆ. ಈ ಪೈಕಿ 5ನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ” ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, “ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ ತ್ಯಾಜ್ಯ ಜಲ ಸಂಸ್ಕರಣೆ ಘಟಕ (ಎಸ್.ಟಿ.ಪಿ)ಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಬೇಕು. ಬೆಂಗಳೂರಿನಲ್ಲಿರುವ ಎಲ್ಲ ಕೆರೆಗಳ ನೀರು ಕುಡಿಯಲು ಯೋಗ್ಯವಾದರೆ, ನೀರಿನ ಸಮಸ್ಯೆ ಪರಿಹರಿಸಬಹುದು. ಆದರೆ, ಹೆಚ್ಚುತ್ತಿರುವ ಜನಸಂಖ್ಯೆ, ಅನಧಿಕೃತವಾಗಿ ತಲೆಎತ್ತುತ್ತಿರುವ ಕಟ್ಟಡಗಳು, ಒತ್ತುವರಿಯ ಪರಿಣಾಮವಾಗಿ ದೊಡ್ಡ ಪ್ರಮಾಣದಲ್ಲಿ ಘನ ಮತ್ತು ದ್ರವ ತ್ಯಾಜ್ಯ ಕೆರೆಗಳನ್ನು ಮತ್ತು ಜಲ ಮೂಲಗಳನ್ನು ಸೇರುತ್ತಿವೆ. ಇದನ್ನು ನಿಯಂತ್ರಿಸುವ ಗುರುತರ ಜವಾಬ್ದಾರಿ ಇದ್ದು, ಜಲ ಕಾಯಿದೆಯ ರೀತ್ಯ ತ್ಯಾಜ್ಯ ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಐಟಿ, ಬಿಟಿ ನಗರ ಬೆಂಗಳೂರಿನತ್ತ ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಆಗಲೇಬೇಕು. ನಗರದ ಜನಸಂಖ್ಯೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಸವಾಲಾಗಿದೆ. ಮುಂದಿನ ದಿನಗಳಲ್ಲಿ ಜಲಕ್ಷಾಮ ತಲೆದೋರುವ ಸಾಧ್ಯತೆಯೂ ಇದ್ದು, ಭವಿಷ್ಯದ ದೃಷ್ಟಿಯಿಂದ ಉಳಿದಿರುವ ಎಲ್ಲ ಕೆರೆಗಳ ಸಂರಕ್ಷಣೆ ನಮ್ಮ ಹೊಣೆಯಾಗಿದೆ. ಈ ಕೆರೆಗಳಿಗೆ ತ್ಯಾಜ್ಯ ಜಲ ಸೇರದಂತೆ ಪರಿಸರ ಮಾಲಿನ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“2017ರಲ್ಲಿ ಬೆಳ್ಳಂದೂರು ಕೆರೆಯಲ್ಲಿ ನೊರೆ ಉಕ್ಕಿ ಹರಿದಿದ್ದಷ್ಟೇ ಅಲ್ಲದೆ, ಬೆಂಕಿಯ ಜ್ವಾಲೆ ಕಾಣಿಸಿಕೊಂಡು ದೊಡ್ಡ ಸುದ್ದಿಯಾಗಿತ್ತು. ಆಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಮಂಡಳಿಯು ರಾಜ್ಯ ಸರ್ಕಾರದ 5 ಇಲಾಖೆಗಳಿಗೆ ನಿರ್ದೇಶನ ನೀಡಿದೆ. ತಮ್ಮ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಅರಣ್ಯ ಮತ್ತು ಪರಿಸರ ಇಲಾಖೆ ಈ ನಿಟ್ಟಿನಲ್ಲಿ ಮಾಲಿನ್ಯ ತಡೆಗೆ ತನ್ನ ಪಾಲಿನ ಕರ್ತವ್ಯವನ್ನು ಯಾವುದೇ ಲೋಪಕ್ಕೆ ಆಸ್ಪದವಿಲ್ಲದಂತೆ ನಿರ್ವಹಿಸಬೇಕು. ಯಾರೇ ಕೆರೆಗೆ ತ್ಯಾಜ್ಯ ತಂದು ಸುರಿದರೆ, ರಾಸಾಯನಿಕ ಮತ್ತು ಸಂಸ್ಕರಿಸದ ತ್ಯಾಜ್ಯವನ್ನು ನೇರವಾಗಿ ಹರಿಯಬಿಟ್ಟರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವಂತೆ ಸೂಚಿಸಿದರು. ಬೆಂಗಳೂರಿನ ಯಾವುದೇ ಕೆರೆಯಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ಎಚ್ಚರ ವಹಿಸಬೇಕು. ಕೆರೆಯಲ್ಲಿ ತ್ಯಾಜ್ಯ ಸುರಿಯದಂತೆ ನೋಡಿಕೊಳ್ಳಬೇಕು” ಎಂದರು.

“ರಾತ್ರಿಯ ವೇಳೆ ಮಾತ್ರ ಕೊಳಚೆ ಸ್ಥಳಾಂತರಿಸುವುದು ಸೂಕ್ತ ಎಂಬ ಅಭಿಪ್ರಾಯವಿದೆ. ಹೀಗಾಗಿ, ಹೆಚ್ಚುವರಿ ವಾಹನ ಬಳಕೆ ಮಾಡಿ ಕಾಮಗಾರಿ ಶೀಘ್ರ ಮುಗಿಸಿ, ಕೆರೆ ಪುನಶ್ಚೇತನ ಮಾಡಿದರೆ ಒಳಿತಾಗುತ್ತದೆ. ಹೊಸ ಎಸ್.ಟಿ.ಪಿ.ಗಳ ನಿರ್ಮಾಣದ ಜೊತೆಗೆ ಹಳೆಯ 5 ಎಸ್.ಟಿ.ಪಿ.ಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ನಡೆಯುತ್ತಿದೆ. ಮುಂದಿನ 10 ವರ್ಷಗಳ ಅವಧಿಗೆ ಅಗತ್ಯವಾದ ಎಸ್.ಟಿ.ಪಿಗಳ ನಿರ್ಮಾಣವೂ ಆಗಬೇಕು. ಕೆಲಸ ಅರ್ಧಕ್ಕೆ ನಿಂತರೆ ಮಾಡಿದ ಹಣವೂ ವ್ಯರ್ಥವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳ ಹಳೆಯ ಬಸ್‌ ಪಾಸ್‌ ಅವಧಿ ವಿಸ್ತರಣೆ: ಕೆಎಸ್‌ಆರ್‌ಟಿಸಿ

ನೋಟಿಸ್ ಜಾರಿ

“ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಮಗು ಮೃತಪಟ್ಟು ಹಲವರು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಜೀವ ಜಲ ವಿಷವಾದರೆ ಬದುಕುವುದು ಹೇಗೆ? ಇಂತಹ ನಿರ್ಲಕ್ಷ್ಯ ತಾಳುವ ಅಧಿಕಾರಿ ಎಷ್ಟೇ ದೊಡ್ಡವರಾದರೂ, ಪ್ರಭಾವಿಯಾದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದರು.

ಈ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ್ ರಾಜ್ ಮತ್ತಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...