ಬೆಂಗಳೂರು | 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Date:

ಖಾಸಗಿ ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

- Advertisement -

ವಿಜಯಲಕ್ಷ್ಮೀ(17) ಆತ್ಮಹತ್ಯೆಗೆ ಶರಣಾದ ಯುವತಿ. ಇವರು ಖಾಸಗಿ ಕಾಲೇಜವೊಂದರಲ್ಲಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಜಯಲಕ್ಷ್ಮೀ ತಂದೆ-ತಾಯಿಗೆ ವಿಚ್ಛೇದನವಾದ ಬಳಿಕ, ತನ್ನ ತಾಯಿ ಯಶೋಧ ಅವರ ಜತೆಗೆ ನಗರದ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸಿಸುತ್ತಿದ್ದರು.

ಸೆ.19ರಂದು ವಿಜಯಲಕ್ಷ್ಮೀ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದರಂತೆ, ಇವರು ಕಳೆದ ಒಂದು ವಾರದಿಂದ ಡಿಪ್ರೆಷನ್​ಲ್ಲಿದ್ದರು ಎಂದು ತಿಳಿದುಬಂದಿದೆ.

ಸೆ.21 ರಂದು ವಿಜಯಲಕ್ಷ್ಮೀ ಸಾವನ್ನಪ್ಪಿದ್ದಾರೆ. ಸ್ನೇಹಿತರ ಮನೆಗೆ ಮಗಳು ಹೋಗಿರಬಹುದು ಎಂದು ಭಾವಿಸಿದ್ದ ತಾಯಿ ಒಂದು ದಿನ ಕಳೆದ ಬಳಿಕ ಮಗಳು ಮನೆಗೆ ವಾಪಸ್ ಬರದೇ ಇದ್ದಾಗ, ಅವರು ಜ್ಞಾನಭಾರತಿ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು. ಈ ವೇಳೆ ಮಗಳ ಸಾವಿನ ಸುದ್ದಿ ತಿಳಿದಿದೆ.

ಈ ಸುದ್ದಿ ಓದಿದ್ದೀರಾ? ಓಲಾ, ರ್‍ಯಾಪಿಡೋಗಳಿಂದ ಬೈಕ್ ಟ್ಯಾಕ್ಸಿ : ಆಟೋ ಚಾಲಕರಿಗೆ ಎದುರಾದ ಮತ್ತೊಂದು ಸಂಕಷ್ಟ

ಯುವತಿ ಸಾಯುವ ಮುನ್ನ ಮಂಗಳೂರಿಗೆ ತೆರಳಿದ್ದಳು ಎಂದು ತಿಳಿದುಬಂದಿದೆ. ಹಾಗೇ, ಒಬ್ಬರಿಗೆ ಕರೆ ಮಾಡಿದ್ದು, ಯಾರಿಗೆ ಕರೆ ಮಾಡಿದ್ದರು. ಮಂಗಳೂರಿಗೆ ಏಕೆ ಹೋಗಿದ್ದರು ಎಂಬ ಪ್ರಶ್ನೆ ಮೂಡಿದೆ.

ಘಟನೆ ಸಂಬಂಧ ತಾಯಿ ನೀಡಿದ ದೂರಿನ ಮೇರೆಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನ ಮರಣೊತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಈ ಬಗ್ಗೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್, “ಖಾಸಗಿ ಅಪಾರ್ಟ್‌ಮೆಂಟ್‌ ಕಟ್ಟಡದ 13ನೇ ಮಹಡಿಯಿಂದ ಜಿಗಿದು ಓರ್ವ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂದು ತಿಳಿದುಬಂದಿದೆ. ಸೆ.19 ರಂದು ಮನೆಯಿಂದ ಹೋದವರು ಧರ್ಮಸ್ಥಳಕ್ಕೆ ತೆರಳಿದ್ದಾಳೆ. ಹುಡುಗಿ ಧರ್ಮಸ್ಥಳದಲ್ಲಿ ಸುತ್ತಾಡಿದ್ದಾಗ ಈಕೆಯನ್ನು ನೋಡಿದ ಒಬ್ಬರು ಬೆಂಗಳೂರಿಗೆ ವಾಪಸ್ ಕಳುಹಿಸಿದ್ದಾರೆ” ಎಂದರು.

“ಬೆಂಗಳೂರಿಗೆ ವಾಪಸ್ ಬಂದ ಹುಡುಗಿ ಅಪಾರ್ಟ್ಮೆಂಟ್ ಒಳಗೆ ಹೋಗಿದ್ದಾಳೆ. ಈ ವೇಳೆ, ಅಪಾರ್ಟ್‌ಮೆಂಟ್ ಸೆಕ್ಯೂರಿಟಿ ಗಾರ್ಡ್‌ ತಡೆದಾಗ 9ನೇ ಮಹಡಿಗೆ ಹೋಗಬೇಕು ಎಂದು ಹೇಳಿದ್ದಾಳೆ. ಸೆಕ್ಯೂರಿಟಿ ಗಾರ್ಡ್‌ ಆ ನಿವಾಸಿ ಅವರಿಗೆ ಕರೆ ಮಾಡಿ ಕೇಳಿದಾಗ ಅತಿಥಿ ಬಂದಿದ್ದಾರೆ ಎಂದು ನಿವಾಸಿ ಕಳುಹಿಸಿಕೊಡಿ ಎಂದು ಹೇಳಿದ್ದಾರೆ. ಬಳಿಕ ಹುಡುಗಿ 13ನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡುಗಿ ಮಾನಸಿಕವಾಗಿ ನೊಂದಿದ್ದಳು ಎಂಬುದು ತಿಳಿದುಬಂದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...