ಬೆಂಗಳೂರು | ಕಟ್ಟಡದಿಂದ ಬಿದ್ದು ಉದ್ಯಮಿ ಅನುಮಾನಾಸ್ಪದ ಸಾವು

Date:

ಕಟ್ಟಡದಿಂದ ಬಿದ್ದು ಉದ್ಯಮಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ನಾಗರಬಾವಿಯಲ್ಲಿ ನಡೆದಿದೆ.

- Advertisement -

ಮಾರಾಂಜಿನಪ್ಪ(62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಾರಾಂಜಿನಪ್ಪ ಅವರು ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ನಾಗರಬಾವಿಯಲ್ಲಿರುವ ತಮ್ಮ ಎರಡನೇ ಪತ್ನಿಯ ಮನೆಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಎರಡನೇ ಪತ್ನಿಯೇ ಕೊಲೆ ಮಾಡಿರುವುದಾಗಿ ಮೊದಲ ಪತ್ನಿಯು ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಾರಾಂಜಿನಪ್ಪ ಅವರನ್ನು ಎರಡನೇ ಪತ್ನಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಉದ್ಯಮಿ ಮೃತಪಟ್ಟಿದ್ದಾರೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾರಾಂಜಿನಪ್ಪ ಕುಟುಂಬಸ್ಥರು ಎರಡನೇ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆಕಸ್ಮಿಕವಾಗಿ ಕಟ್ಟಡದಿಂದ ಬಿದ್ದಿರುವ ಬಗ್ಗೆ ವೈದ್ಯರು ವರದಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆ ಮುಂದುವರೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೈಫ್ ಟೈಂ ಟ್ಯಾಕ್ಸ್‌ | ಸರ್ಕಾರದ ವಿರುದ್ಧ ಸಿಡಿದೆದ್ದ ಗೂಡ್ಸ್‌ ವಾಹನ ಮಾಲೀಕರು; ಸೆ. 1ರಂದು ಪ್ರತಿಭಟನೆ

ಮಾರಾಂಜಿನಪ್ಪ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಮೊದಲ ಹೆಂಡತಿಯು ಬಾಗಲಕುಂಟೆಯಲ್ಲಿ ವಾಸವಾಗಿದ್ದಾರೆ. ಎರಡನೇ ಪತ್ನಿ ಅನ್ನಪೂರ್ಣೇಶ್ವರಿನಗರದಲ್ಲಿ ಇದ್ದರು. ಆಗಸ್ಟ್‌ 30ರಂದು ರಾತ್ರಿ ಎರಡನೇ ಪತ್ನಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಮಾರಾಂಜಿನಪ್ಪ ಕುಡಿದಿದ್ದರು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...