ಬೆಂಗಳೂರು | ಜ.17ರಂದು ಟಿ-20 ಕ್ರಿಕೆಟ್ : ಹೆಚ್ಚುವರಿ ಬಸ್ ಸೇವೆ ಒದಗಿಸಿದ ಬಿಎಂಟಿಸಿ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ಇಂಡಿಯಾ ಹಾಗೂ ಆಫ್ಘಾನಿಸ್ತಾನ ನಡುವೆ ಟಿ-20 ಹೊನಲು ಬೆಳಕಿನ ಪಂದ್ಯ ನಡೆಯಲಿದೆ. ಈ ಪಂದ್ಯ ವೀಕ್ಷಣೆಗೆ ಸಾವಿರಾರು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ, ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೆಚ್ಚುವರಿ ಬಸ್​ ಸೇವೆಯನ್ನು ಒದಗಿಸಲಿದೆ.

- Advertisement -

ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಕೆಂಗೇರಿ ಕೆಎಚ್‍ಬಿ ವಸತಿ ಗೃಹಗಳು, ಜನಪ್ರಿಯ ಟೌನ್‍ಶಿಪ್ ನೆಲಮಂಗಲ, ಯಲಹಂಕ 5ನೇ ಹಂತ, ಆರ್‍ಕೆ ಹೆಗಡೆನಗರ–ಯಲಹಂಕ, ಬಾಗಲೂರು, ಹೊಸಕೋಟೆ ಸೇರಿದಂತೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್​​​ ಕಾರ್ಯಾಚರಣೆ ನಡೆಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಾರ್ಗಸಂಖ್ಯೆ ಎಸ್‍ಬಿಎಸ್ -1ಕೆ ಬಸ್ ಎಚ್‍ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್‍ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೇಸ್‌ಕೋರ್ಸ್‌ ಮೇಲೆ ಸಿಸಿಬಿ ದಾಳಿ; ₹3 ಕೋಟಿ 47 ಲಕ್ಷ ಹಣ ಜಪ್ತಿ

ಜಿ-6 ಬಸ್ ಮೈಸೂರು ರಸ್ತೆ, ನಾಯಂಡಹಳ್ಳಿ ಮಾರ್ಗವಾಗಿ ಕೆಂಗೇರಿ ಕೆಎಚ್‍ಬಿ ಕ್ವಾಟ್ರರ್‍ಸ್ ತಲುಪಿದರೆ ಜಿ-7 ಬಸ್ ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‍ಶಿಪ್ ಹಾಗೂ ಜಿ-8 ಬಸ್ ಯಶವಂತಪುರ ಮಾರ್ಗವಾಗಿ ನೆಲಮಂಗಲ ಸಂಚರಿಸಲಿದೆ. ಜಿ-9 ಬಸ್ ಹೆಬ್ಬಾಳ ಮಾರ್ಗವಾಗಿ ಯಲಹಂಕ 5ನೇ ಹಂತ, ಜಿ-10ರ ಬಸ್ ನಾಗವಾರ, ಟ್ಯಾನರಿ ರಸ್ತೆ ಮೂಲಕ ಹೆಗಡೆನಗರ, ಯಲಹಂಕ ತಲುಪಲಿದೆ.

ಜಿ-11ರ ಬಸ್ ಹೆಣ್ಣೂರು ರಸ್ತೆ ಮೂಲಕ ಬಾಗಲೂರುವರೆಗೆ ಸಂಚರಿಸಲಿದ್ದು, ಕೆಎಚ್‍ಬಿ-12 ಎಚ್‍ಕೆ ಬಸ್ ಟಿನ್ ಫ್ಯಾಕ್ಟ್ರಿ ಮೂಲಕ ಹೊಸಕೋಟೆವರೆಗೂ ಸಂಚರಿಸಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....