ಬೆಂಗಳೂರು | ಟ್ಯಾಂಕ್ ಕುಸಿದು ಮೂವರು ಸಾವು; ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲು

Date:

ನಾಲ್ಕು ಅಂತಸ್ತಿನ ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಬಿದ್ದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಟ್ಟಡದ ಮಾಲೀಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304ಎ ಅಡಿಯಲ್ಲಿ ನಿರ್ಲಕ್ಷ್ಯ ಪ್ರಕರಣವನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿದೆ.

“ನಾಲ್ಕನೇ ಮಹಡಿಯಿಂದ ವಾಟರ್ ಟ್ಯಾಂಕರ್ ಜತೆಗೆ ಗೋಡೆಯು ಕುಸಿದು ಬಿದ್ದಿದೆ. ಇದರ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ತಜ್ಞರು ಹಾಗೂ ಪ್ರಮಾಣಿಕೃತ ಸಿವಿಲ್ ಎಂಜಿನಿಯರ್ ಅವರ ಅಭಿಪ್ರಾಯಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಡಿಸಿಪಿ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಇಬ್ಬರು ಸಾವು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು, “ವಾಟರ್‌ ಟ್ಯಾಂಕರ್ ಹೆಚ್ಚಿನ ನೀರು ತುಂಬಿ ಒತ್ತಡ ತಡೆಯಲಾಗದೆ ಟ್ಯಾಂಕರ್ ಬಿದ್ದಿದೆ. ಈ ವೇಳೆ, ಗೋಡೆಯು ಕುಸಿದು ಬಿದ್ದಿದೆ. ಟ್ಯಾಂಕರ್ ಇರುವ ಕೆಳಗೆ ಎಗ್‌ರೈಸ್‌ ಅಂಗಡಿಯೊಂದಿತ್ತು. ಗ್ರಾಹಕರು ಅಂಗಡಿಯ ಬಳಿ ಇದ್ದರು. ನೀರಿನ ಟ್ಯಾಂಕರ್ ಬಿದ್ದ ಪರಿಣಾಮ ಅಂಗಡಿಯಲ್ಲಿ ಕೆಲಸ ಮಾಡುವ ಓರ್ವ ಯುವಕ ಸೇರಿದಂತೆ ಇಬ್ಬರು ಗ್ರಾಹಕರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ | ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: ‘ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಲ್ಲ’ ಎಂದ ರೈತ ಮುಖಂಡರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಳೆದ 842 ದಿನಗಳಿಂದ ಹೋರಾಟ ನಡೆಸುತ್ತಿದ್ದ...

ರಾಮನಗರ | 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಬಂಧನ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು...

ವಿಪಕ್ಷಗಳಿಗೆ ದಃಸ್ವಪ್ನವಾಗಿದ್ದ ‘ಇ.ಡಿ’ ಮೇಲೆಯೇ ಎಫ್ಐಆರ್

ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ...

ಕರ್ತವ್ಯ ಸಂಬಂಧಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತಿಲ್ಲ; ಪೊಲೀಸರಿಗೆ ಆಯುಕ್ತರ ಎಚ್ಚರಿಕೆ

ಪೊಲೀಸ್‌ ಸಿಬ್ಬಂದಿಗಳು ಸಮವಸ್ತ್ರದಲ್ಲಿರುವ ತಮ್ಮ ಫೋಟೋ, ವಿಡಿಯೋ, ರೀಲ್ಸ್‌ ಸೇರಿದಂತೆ ಕರ್ತವ್ಯಕ್ಕೆ...