ಬೆಂಗಳೂರು | ಕಳ್ಳನನ್ನು ಬಂಧಿಸಿ ಹತ್ಯೆಗೈದ ಆರೋಪಿಗಳು

Date:

  • ಸ್ಕ್ರ್ಯಾಪ್ ಅಂಗಡಿಯಲ್ಲಿ ಪದೇಪದೆ ಕಳ್ಳತನ ಮಾಡುತ್ತಿದ್ದ ಸೆಫುಲ್ಲಾ
  • ಮಗನ ಕಾಣೆ ಬಗ್ಗೆ ಮೃತನ ತಾಯಿ ಕೆ.ಜಿ ಹಳ್ಳಿ ಪೊಲೀಸ್‌ ಠಾಣೆಗೆ ದೂರು

ಕಳೆದ ತಿಂಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯೊಬ್ಬನ ಸಾವು ಪ್ರಕರಣಕ್ಕೆ, ಇದೀಗ ತಿರುವು ಸಿಕ್ಕಿದೆ. ಕಳ್ಳನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.

- Advertisement -

ಬೆಂಗಳೂರಿನ ರಾಮಮೂರ್ತಿನಗರದ ಸಾದಹಳ್ಳಿ ಬಳಿಯ ಚರಂಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿತ್ತು‌. ಮೃತ ಯುವಕನನ್ನು ಸೆಫುಲ್ಲಾ ಎಂದು ಗುರುತಿಸಲಾಗಿತ್ತು. ರಾಮಮೂರ್ತಿನಗರ ಪೊಲೀಸರು ಅನುಮಾನಾಸ್ಪಾದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪೊಲೀಸ್ ತನಿಖೆ ವೇಳೆ, ಇದೊಂದು ಕೊಲೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಪ್ರಶಾಂತ್, ಜಬಿ ಹಾಗೂ ಶಾಬಾಜ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಹಿನ್ನಲೆ

ಸೆಫುಲ್ಲಾ ಕಾಣೆಯಾಗಿದ್ದಾನೆಂದು ಆತನ ತಾಯಿ ಕೆ.ಜಿ ಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅಲ್ಲದೆ, ಸೆಫುಲ್ಲಾ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ, ಪ್ರಶಾಂತ್ ಹಾಗೂ ಆತನ ಸಹಚರರು ಕೂಡಿ ಹಾಕಿ ಹಲ್ಲೆ ನಡೆಸಿದ್ದರು ಎಂದೂ ಮೃತನ ತಾಯಿ ದೂರಿನಲ್ಲಿ ತಿಳಿಸಿದ್ದರು. ಬಳಿಕ, ಪ್ರಶಾಂತ್​ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಆತ ಸತ್ಯ ಬಾಯಿಬಿಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡಿಗರ ಭಾವನೆಗಳೊಂದಿಗೆ ಅಮೂಲ್‌ ಆಟವಾಡುತ್ತಿದೆ; ಕರವೇ ಆರೋಪ

ಕೆ.ಜಿ ಹಳ್ಳಿಯಲ್ಲಿ ಪ್ರಶಾಂತ ಎಂಬುವವರಿಗೆ ಸೇರಿದ್ದ ಸ್ಕ್ರ್ಯಾಪ್ ಅಂಗಡಿಯಲ್ಲಿ ಪದೇಪದೆ ಕಳ್ಳತನವಾಗುತ್ತಿತ್ತು. ಕಳ್ಳನನ್ನು ಹಿಡಿಯಲು ಮೂವರು ಬಂಧಿತ ಆರೋಪಿಗಳು ಪ್ರಯತ್ನಿಸುತ್ತಿದ್ದರು. ಅಂಗಡಿಯಲ್ಲಿ ಕಳ್ಳತನ ಮಾಡುವಾಗ ಸೆಫುಲ್ಲಾನನ್ನು ಮೂವರೂ ಸೇರಿ ಹಿಡಿದಿದ್ದರು. ಒಂದು ವಾರದ ವರೆಗೆ ಆತನನ್ನು ಕೂಡಿ ಹಾಕಿ ನಿರಂತರವಾಗಿ ಹಲ್ಲೆ ಮಾಡಿದ್ದಾರೆ. ಆತ ಸಾವನ್ನಪ್ಪಿದ ಬಳಿಕ ಸೆಫುಲ್ಲಾನನ್ನು ಚರಂಡಿಯೊಂದರಲ್ಲಿ ಎಸೆದಿದ್ದರು‌ ಎಂದು ವಿಚಾರಣೆ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...