ಬೆಂಗಳೂರು ಜೋಡಿ ಹತ್ಯೆ | ಯುವತಿಗೋಸ್ಕರ ನಡೆಯಿತಾ? ಜಿ ನೆಟ್ ಅರುಣ್ ಪಾತ್ರವಿದೆಯಾ?

Date:

  • ಪಂಪಾ ಬಡಾವಣೆಯಲ್ಲಿ ಮಂಗಳವಾರ ನಡೆದ ಘಟನೆ
  • ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಹಾಡಹಗಲೇ ಜೋಡಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷಣಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದ್ದು, ಯುವತಿಗೋಸ್ಕರ ಈ ಹತ್ಯೆ ನಡೆದಿದೆಯಾ, ಇದರಲ್ಲಿ ಜಿ ನೆಟ್ ಅರುಣ್ ಪಾತ್ರವಿದೆಯಾ ಎಂಬ ಸಂಶಯ ಹುಟ್ಟಿಕೊಂಡಿದೆ.

- Advertisement -

ಬೆಂಗಳೂರಿನ ಹೆಬ್ಬಾಳ ಸಮೀಪದ ಪಂಪಾ ಬಡಾವಣೆಯಲ್ಲಿ ಮಂಗಳವಾರ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಸಿಇಒ ವಿನುಕುಮಾರ್ ಮತ್ತು ಏರೋನಿಕ್ಸ್‌ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಅವರ ಹತ್ಯೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಠಾಣೆಯ ಪೊಲೀಸರು ಶಬರೀಶ್ ಅಲಿಯಾಸ್ ಫೆಲಿಕ್ಸ್‌, ಶಿವು ಹಾಗೂ ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಏರೋನಿಕ್ಸ್‌ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಫೆಲಿಕ್ಸ್‌ ವ್ಯವಹಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ಕೊಲೆಗೆ ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿತ್ತು.

ಇದೀಗ ಆರೋಪಿ ಫೆಲಿಕ್ಸ್‌ ಹುಡುಗಿ ವಿಚಾರಕ್ಕಾಗಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಡಿ ಫಣೀಂದ್ರನ ಜತೆ ಜಗಳ ಮಾಡಿಕೊಂಡು ಕೊಲೆ ಮಾಡುವ ಬೆದರಿಕೆ ಹಾಕಿದ್ದನು ಎನ್ನಲಾಗಿದೆ.

ಫೆಲಿಕ್ಸ್‌ ಹಾಗೂ ಏರೋನಿಕ್ಸ್‌ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಇಬ್ಬರು ಬನ್ನೇರುಘಟ್ಟದಲ್ಲಿದ್ದ ಜಿ ನೆಟ್ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ಆರೋಪಿ ಫೆಲಿಕ್ಸ್‌ ಜತೆಗೆ ಯುವತಿಯೊಬ್ಬಳು ಸಲುಗೆಯಿಂದಿದ್ದಳು. ಅದೇ ಹುಡುಗಿ ಎಂಡಿ ಫಣಿಂದ್ರ ಜತೆಗೂ ಸಲುಗೆಯಿಂದ ಇದ್ದಳು. ಹೀಗೆ ಇರುವುದನ್ನು ಸಹಿಸದ ಫೆಲಿಕ್ಸ್‌ ಇದೇ ವಿಚಾರವಾಗಿ ಎಂಡಿ ಫಣಿಂದ್ರನ ಜತೆಗೆ ಜಗಳವಾಡುತ್ತಿದ್ದನು. ನನ್ನ ಹುಡುಗಿ ವಿಚಾರಕ್ಕೆ ಬಂದರೆ ನಿನ್ನನ್ನು ಮುಗಿಸಿ ಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಜೋಡಿ ಕೊಲೆ; ಮೂವರು ಆರೋಪಿಗಳ ಬಂಧನ

ಇದೀಗ ತನಿಖೆ ಆರಂಭಿಸಿರುವ ಅಮೃತಹಳ್ಳಿ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರೆಸಿದ್ದಾರೆ. ಜಿ ನೆಟ್‌ ಕಂಪನಿಯ ಮಾಲೀಕ ಅರುಣ್ ಕುಮಾರ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಬಿ.ಎಂ.ಲಕ್ಷ್ಮೀಪ್ರಸಾದ್, “ಮಂಗಳವಾರ ಮಧ್ಯಾಹ್ನ ಸುಮಾರು 3.30ರಿಂದ ಸಂಜೆ 4 ಗಂಟೆಗೆ ಇಬ್ಬರ ಕೊಲೆಯಾಗಿದೆ. ಆರೋಪಿಗಳು ಕೆಲಸ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಆಫೀಸ್‌ಗೆ ಬಂದು ಕೊಲೆ ಮಾಡಿ ಹಿಂಬಾಗಿಲಿನಿಂದ ಪರಾರಿಯಾಗಿದ್ದರು. ಇದರಲ್ಲಿ ಜಿ ನೆಟ್‌ ಕಂಪನಿಯ ಮಾಲೀಕ ಅರುಣ್‌ ಕುಮಾರ್ ಶಾಮೀಲಾಗಿರುವ ಶಂಕೆ ಇದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲೆ ಕುಣಿಗಲ್​ನಲ್ಲಿ ಬಂಧಿಸಲಾಗಿದೆ” ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಅಮೃತಹಳ್ಳಿ ಪೊಲೀಸರನ್ನು ಈ ದಿನ.ಕಾಮ್ ಸಂಪರ್ಕಿಸಿದ್ದು, ಪೊಲೀಸರು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸದೇ, ಕರೆಯನ್ನು ಕಟ್ ಮಾಡಿದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...