ಬೆಂಗಳೂರು | ಶಂಕಿತ ಉಗ್ರರ ವಿಚಾರಣೆಗೆ ಸಿಸಿಬಿಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದ ನ್ಯಾಯಾಲಯ

Date:

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನದಲ್ಲಿರುವ ಐವರು ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಅಪರಾಧ ವಿಭಾಗಕ್ಕೆ(ಸಿಸಿಬಿ) 10 ದಿನಗಳ ಕಾಲಾವಕಾಶ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

ಐವರು ಶಂಕಿತರ ಕಸ್ಟಡಿ ವಿಚಾರಣೆಗೆ ಸಿಸಿಬಿ 15 ದಿನಗಳ ಕಾಲಾವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಆದರೆ, ನ್ಯಾಯಾಲಯ 10 ದಿನಗಳ ಕಾಲಾವಕಾಶ ನೀಡಿದೆ. ಶಂಕಿತ ಉಗ್ರರು ಸ್ಫೋಟ ನಡೆಸಲು ಯೋಜಿಸಿದ್ದರು ಎನ್ನಲಾದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸುಲ್ತಾನಪಾಳ್ಯದ ಸೈಯದ್ ಸುಹೇಲ್ ಖಾನ್ (24), ಮೊಹಮ್ಮದ್ ಉಮರ್ ಖಾನ್(29), ಜಾಹಿದ್ ತಬ್ರೇಜ್(25), ಸೈಯದ್ ಮುದಸ್ಸಿರ್ ಪಾಷಾ(28) ಹಾಗೂ ಫ್ರೇಜರ್ ಟೌನ್‌ನ ಮೊಹಮ್ಮದ್ ಫಿಜಲ್ ರಬ್ಬಾನಿ (30) ಅವರನ್ನು ಜುಲೈ 18ರಂದು ಸುಲ್ತಾನಪಾಳ್ಯದಲ್ಲಿ ಬಂಧಿಸಲಾಗಿದೆ ಎಂದು ಸಿಸಿಬಿ ತಿಳಿಸಿದೆ. ಸದ್ಯ ಅವರು ಮಡಿವಾಳದ ಪೊಲೀಸ್ ಟೆಕ್ನಿಕಲ್ ಸೆಲ್‌ನಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅತ್ಯುತ್ತಮ ಆರ್.ಆರ್.ಆರ್ ನಗರವಾಗಿ ಆಯ್ಕೆಯಾದ ಬಿಬಿಎಂಪಿ

2008ರ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಕೇಂದ್ರ ಕಾರಾಗೃಹದಲ್ಲಿರುವ ಆರನೇ ಶಂಕಿತ ಟಿ ನಾಸೀರ್‌ನನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...