ಬೆಂಗಳೂರು | ಕುಡಿದ ಮತ್ತಿನಲ್ಲಿ 30ಕ್ಕೂ ಹೆಚ್ಚು ವಾಹನ ಜಖಂ ಮಾಡಿದ ಪುಂಡರು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಹೆಚ್ಚಾಗಿದ್ದು, ನಗರ ಪೊಲೀಸ್ ಇಲಾಖೆ ಇದನ್ನು ತಡೆಗಟ್ಟಲು ಹಲವು ಶಿಸ್ತು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಲಗ್ಗೆರಿಯ ರಾಜೀವ್ ಗಾಂಧಿ ನಗರದಲ್ಲಿ ಕುಡಿದ ಮತ್ತಿನಲ್ಲಿ ಕೆಲವು ಪುಂಡರು ಲಾಂಗ್‌ ಮತ್ತು ಮಚ್ಚಿನಿಂದ ಕೇವಲ ಐದು ನಿಮಿಷದಲ್ಲಿ 30ಕ್ಕೂ ಹೆಚ್ಚು ವಾಹನಗಳನ್ನು ಜಖಂ ಮಾಡಿದ ಘಟನೆ ನಡೆದಿದೆ.

- Advertisement -

“ಶುಕ್ರವಾರ ಬೆಳಗಿನ ಜಾವ ಸುಮಾರು 2-3 ಗಂಟೆಗೆ ಮೂವರು ಕೀಡಿಗೇಡಿಗಳು ಮಾಸ್ಕ್‌ ಧರಿಸಿ ಈ ಕೃತ್ಯ ಎಸಗಿದ್ದಾರೆ. ಮೂರು ರಸ್ತೆಗಳಲ್ಲಿ ನಿಲ್ಲಿಸಿದ್ದ ಸುಮಾರು 30ಕ್ಕೂ ಹೆಚ್ಚು ವಾಹನಗಳ ಮೇಲೆ ಲಾಂಗ್‌ ಮತ್ತು ಮಚ್ಚಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೀಡಿಗೇಡಿಗಳ ಈ ದುಷ್ಕ್ರತ್ಯಕ್ಕೆ ಬರೋಬ್ಬರಿ 30 ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಈ ಪೈಕಿ, 12 ಕಾರು, 1 ಆಟೋ, 4 ಟೆಂಪೋಗಳ ಗ್ಲಾಸ್‌ ಪುಡಿ ಪುಡಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 25 ಲಕ್ಷ ಅಮೆರಿಕನ್ ಡಾಲರ್; ದೆಹಲಿಯತ್ತ ಪೊಲೀಸರು

ಈ ಘಟನಾ ಸ್ಥಳಕ್ಕೆ ರಾಜರಾಜೇಶ್ವರಿನಗರದ ಶಾಸಕ ಮುನಿರತ್ನ ಅವರು ಭೇಟಿ ನೀಡಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...