ಬೆಂಗಳೂರು | ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ಸಂಚಾರ ಯಶಸ್ವಿ

Date:

  • ಆಗಸ್ಟ್‌ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ ಸಾಧ್ಯತೆ
  • ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಪ್ರಯಾಣ

ನಮ್ಮ ಮೆಟ್ರೋ ನೇರಳೆ ಮಾರ್ಗದ ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ.

- Advertisement -

ಆಗಸ್ಟ್‌ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆಯಿದೆ. ಸುರಕ್ಷಾ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಬೈಯಪ್ಪನಹಳ್ಳಿ-ಕೆ.ಆರ್.ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

“ಬುಧವಾರ ಮೊದಲನೇ ರೈಲು ಪ್ರಾಯೋಗಿಕ ಸಂಚಾರವು ಕೆ.ಆರ್.ಪುರ ಮತ್ತು ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ಸಂಜೆ 6.04 ಗಂಟೆಗೆ ಪ್ರಾರಂಭವಾಗಿ ಮತ್ತೆ ಮರಳಿ ಕೆ.ಆರ್.ಪುರ ನಿಲ್ದಾಣಕ್ಕೆ ತಲುಪಿತು” ಎಂದು ನಮ್ಮ ಮೆಟ್ರೋ ಟ್ವೀಟ್‌ ಮಾಡಿದೆ.

ವೈಟ್ ಫೀಲ್ಡ್‌ನಿಂದ ಬೈಯಪ್ಪನಹಳ್ಳಿ‌ ಮಾರ್ಗದಲ್ಲಿ ಸಂಚರಿಸುವ ಜನ ಕೆ.ಆರ್.ಪುರದಲ್ಲಿ ಇಳಿದು ನಂತರ ಬೇರೆ ಸಾರಿಗೆ ಅವಲಂಬಿಸಬೇಕಿತ್ತು. ಆದರೆ, ಈಗ ಬೈಯಪ್ಪನಹಳ್ಳಿ ಹಾಗೂ ಕೆ.ಆರ್.ಪುರ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಸುಲಭವಾಗಿ ಹಾಗೂ ಕಡಿಮೆ ಅವಧಿಯಲ್ಲಿ ಪ್ರಯಾಣ ಬೆಳೆಸಬಹುದು. 

ಈ ಸುದ್ದಿ ಓದಿದ್ದೀರಾ? ಇಬ್ಬರು ಕಳ್ಳರಿಂದ 18 ಮೊಬೈಲ್, 11 ದ್ವಿಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು

ಬೈಯಪ್ಪನಹಳ್ಳಿ-ಕೆ.ಆರ್‌.ಪುರ ಮೆಟ್ರೋ 2.1 ಕಿ.ಮೀ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ 1.9 ಕಿ.ಮೀ ಮೆಟ್ರೋ ಕಾಮಗಾರಿ ಬಾಕಿ ಇದೆ. ಇವೆರಡೂ ಪೂರ್ಣಗೊಂಡ ಬಳಿಕ ಚಲ್ಲಘಟ್ಟ-ವೈಟ್‌ಫೀಲ್ಡ್‌ವರೆಗಿನ 43.5 ಕಿ.ಮೀ ನೇರಳೆ ಮಾರ್ಗ ಪೂರ್ಣವಾದಂತಾಗಲಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...