ಬೆಂಗಳೂರು | ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸಂಖ್ಯೆ ಮೂರು ಪಟ್ಟು ಏರಿಕೆ

Date:

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ರಾಜಧಾನಿ ಬೆಂಗಳೂರಿನ ಜನ ಮುಖ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ನಾನಾ ಮಾದರಿಯ 2.83 ಲಕ್ಷ ವಾಹನಗಳು ಕಳೆದ ಆರು ವರ್ಷದಲ್ಲಿ ನೋಂದಣಿಯಾಗಿವೆ. ಅದರಲ್ಲೂ ನಗರದಲ್ಲಿ ಮೂರು ಪಟ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿದೆ.

- Advertisement -

ಪೆಟ್ರೋಲ್ ಬೆಲೆ ಹೆಚ್ಚಳ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಜನರು ಎಲೆಕ್ಟ್ರಿಕ್‌ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. 2017-2018ರ ಹಣಕಾಸಿನ ವರ್ಷದಲ್ಲಿ ದ್ವಿಚಕ್ರ, ತ್ರಿ ಚಕ್ರ, ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 1,992 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದವು. 2018-19 ರಲ್ಲಿ 5,542, 2019-20ರಲ್ಲಿ 6,674, 2020-21ರಲ್ಲಿ 11,593 ಎಲೆಕ್ಟ್ರಿಕ್ ವಾಹನಗಳು ನೋಂದಣಿ ಆಗಿವೆ. 2021ರ ಬಳಿಕ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

2017-18ರಲ್ಲಿ ಎಲೆಕ್ಟ್ರಿಕ್‌ ವಾಹನ ನೋಂದಣಿಯ ಸಂಖ್ಯೆ ಹಾಗೂ 2023-24ರಲ್ಲಿನ ವಾಹನಗಳ ನೋಂದಣಿಯನ್ನು ಗಮನಿಸಿದರೆ ಎಲೆಕ್ಟ್ರಿಕ್‌ ವಾಹನಗಳ ನೋಂದಣಿ ಪ್ರಮಾಣ ಶೇ. 1000ರಷ್ಟು ಹೆಚ್ಚಾಗಿದೆ.

2021-22ರಲ್ಲಿ 44,217, 2022-23ರಲ್ಲಿ 1,10,492 ವಾಹನಗಳು ನೋಂದಣಿಯಾದರೆ, 2023-24 ರಲ್ಲಿ ಬರೋಬ್ಬರಿ 1,03,009 ಎಲೆಕ್ಟ್ರಿಕಲ್ ವಾಹನಗಳು ನೋಂದಣಿ ಆಗಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂತರಿಕ್ಷಯಾನದ ಪರಿಕಲ್ಪನೆಯಡಿ ಜನವರಿ 7ರಂದು ಚಿತ್ರಸಂತೆ

2022-23ರಿಂದ ಈಚೆಗೆ ವಾರ್ಷಿಕ 1 ಲಕ್ಷಕ್ಕೂ ಹೆಚ್ಚಿನ ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗುತ್ತಿವೆ. ಈ ಪೈಕಿ ದ್ವಿಚಕ್ರ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆಯಾಗಿದೆ.

“ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿರೋದು, ನಿಜಕ್ಕೂ ಉತ್ತಮ ಬೆಳವಣಿಗೆ” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...