ಬೆಂಗಳೂರು | 1.1 ಲಕ್ಷ ದಾಟಿದ ಯುವ ಮತದಾರರ ಸಂಖ್ಯೆ

Date:

  • ಬೆಂಗಳೂರಿನಲ್ಲಿ ಈ ಹಿಂದೆ ಯುವ ಮತದಾರರ ಸಂಖ್ಯೆ 54,000 ಇತ್ತು
  • ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳ ಬಳಕೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಸೆಳೆಯಲು ಚುನಾವಣೆ ಆಯೋಗ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಪರಿಣಾಮ, ಬೆಂಗಳೂರಿನಲ್ಲಿ 54,000 ಇದ್ದ ಯುವ ಮತದಾರರ ಸಂಖ್ಯೆ ಇದೀಗ 1.1 ಲಕ್ಷ ದಾಟಿದೆ.

“ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಹಾಗೂ ಯಲಹಂಕ ಸೇರಿದಂತೆ ಒಟ್ಟು 28 ವಿಧಾನಸಭಾ ಕ್ಷೇತ್ರಗಳನ್ನು ಬೆಂಗಳೂರು ಜಿಲ್ಲೆ ಒಳಗೊಂಡಿದೆ. ನಗರದಲ್ಲಿ 54,000 ಇದ್ದ ಯುವ ಮತದಾರರ ಸಂಖ್ಯೆ ಇದೀಗ 1.1 ಲಕ್ಷ ದಾಟಿದೆ” ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಗಪ್ಪ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ಕಳ್ಳಿಯನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು

“ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಯುವ ಮತದಾರರು ಮುಂದೆ ಬಂದಿದ್ದಾರೆ. ಈ ಹಿಂದೆ ನಗರದಲ್ಲಿ 16,000 ಲಿಂಗತ್ವ ಅಲ್ಪಸಂಖ್ಯಾತ ಮತದಾರರಿದ್ದರು. ಈಗ ಅವರ ಸಂಖ್ಯೆ 30,000ಕ್ಕೆ ಏರಿಕೆ ಕಂಡಿದೆ. ಶೇ.53ರಷ್ಟು ಹೆಚ್ಚಳವಾಗಿದೆ” ಎಂದರು.

“ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈಗಾಗಲೇ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ. ಕೈಗಾರಿಕೆಗಳು, ವಸತಿ ಸಮುಚ್ಚಯಗಳು, ಕಾಲೇಜುಗಳು ಮತ್ತು ಬ್ಯಾಂಕ್‌ಗಳ ಆವರಣದಲ್ಲಿ ಮತದಾನ ಬಗ್ಗೆ ಜಾಗೃತಿ ಚಟುವಟಿಕೆಗಳನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಆತ್ಮಾವಲೋಕನ : ಕೆ ಸುಧಾಕರ್ ಕುಯಿಲು, ಎಂಟಿಬಿ ಹುಯಿಲು!

ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೆ. ಸುಧಾಕರ್...

ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ | ಶರದ್ ಪವಾರ್ ಘೋಷಣೆ

ಎನ್‌ಸಿಪಿ 25ನೇ ವಾರ್ಷಿಕೋತ್ಸವದಲ್ಲಿ ಶರದ್‌ ಪವಾರ್‌ ಘೋಷಣೆ ನಂದ ಶಾಸ್ತ್ರಿ ಅವರನ್ನು ದೆಹಲಿ...

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...