ಬೆಂಗಳೂರು | ಕಂಬಳಕ್ಕೆ ಸಜ್ಜಾಗುತ್ತಿರುವ ಅರಮನೆ ಮೈದಾನ; ಐದು ಲಕ್ಷ ಜನ ಭಾಗಿಯಾಗುವ ನಿರೀಕ್ಷೆ

Date:

ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ ಕಂಬಳ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯಲಿದೆ. ಮಣ್ಣಿನ ಗದ್ದೆಯಲ್ಲಿ ಕೋಣಗಳನ್ನು ಒಡಿಸುವ ಈ ವಿಶಿಷ್ಟವಾದ ಸ್ಪರ್ಧೆಯನ್ನು ನೋಡಲು ಬೆಂಗಳೂರಿನ ಅರಮನೆ ಮೈದಾನದಲ್ಲಿ 5ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ.

- Advertisement -

ನವೆಂಬರ್ 24, 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಯಲಿದೆ. ಸದ್ಯ ಕಂಬಳ ನಡೆಸಲು ಅರಮನೆ ಮೈದಾನದಲ್ಲಿ ಸಿದ್ಧತೆ ನಡೆದಿದೆ. ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ₹1 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಂಗಳೂರಿನಲ್ಲಿ ನಡೆಯುವ ಕಂಬಳದಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ, ನಟಿ ಅನುಷ್ಕಾ ಶೆಟ್ಟಿ ಸೇರಿದಂತೆ ನಾನಾ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

“ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿಯಾಗಿವೆ. ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಜತೆಗೆ ಪ್ರತಿ ತಾಲೂಕಿನಲ್ಲಿ ಸ್ವಾಗತ ಮತ್ತು ಬೀಳ್ಕೊಡುಗೆ ಇರಲಿದೆ” ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲಕ್ಷ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ; ದೂರು ದಾಖಲು

ಕರಾವಳಿ ಭಾಗದ ಐತಿಹಾಸಿಕ ಕಾರ್ಯಕ್ರಮವಾದ ಕಂಬಳಕ್ಕೆ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್​​​ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...