ಬೆಂಗಳೂರು | ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

Date:

  • ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಬೆಂಗಳೂರು ಪೂರ್ವ ವಿಭಾಗದ ಪೋಲಿಸರಿಂದ ದಾಳಿ
  • ಬೆಂಗಳೂರಿನ 8 ವಿಭಾಗದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಒಂದು ಸಾವಿರಕ್ಕೂ ಹೆಚ್ಚು ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ಹಾಗೂ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ಬೆಂಗಳೂರು ಪೊಲೀಸ್‌ ಆಯುಕ್ತ ದಯಾನಂದ್ ಅವರ ಸೂಚನೆ ಮೇರೆಗೆ ನಗರದ 8 ವಿಭಾಗದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ಮಾಡಲಾಗಿದೆ.

ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಬೆಂಗಳೂರು ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಿಸಿಪಿ ಸಿಕೆ ಬಾಬು ನೇತೃತ್ವದಲ್ಲಿ ಕೋರಮಂಗಲ, ಮಡಿವಾಳ, ಆಡುಗೋಡಿ, ಮೈಕೋ ಲೇಔಟ್ ಸೇರಿ ಎಲ್ಲ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ದಾಳಿ ವೇಳೆ ಹಲವು ರೌಡಿಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಕ್ಕೆ ಚಿಕಿತ್ಸೆ; ಪರಿಹಾರ ಪಡೆಯದ ಸಂತ್ರಸ್ತರು

ಆಗ್ನೇಯ ವಿಭಾಗದ ರೌಡಿಶೀಟರ್‌ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ ರೌಡಿಶೀಟರ್‌ಗಳಿಗೆ ಮತ್ತೆ ಎಚ್ಚರಿಕೆ ಕೊಡುವ ಸಲುವಾಗಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಭೂ ದರೋಡೆಕೋರರಿಗೆ ಪ್ರವೇಶವಿಲ್ಲ; ಹೆಮ್ಮಿಗೆಪುರ ನಿವಾಸಿಗಳ ಸಂಕಲ್ಪ

ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಬೆಂಗಳೂರಿನ ಹೆಮ್ಮಿಗೆಪುರ...

ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು,...