ಬೆಂಗಳೂರು | ಮದ್ಯ ಸೇವನೆಗೆ ಹಣ ನೀಡದಿದ್ದಕ್ಕೆ ತಂದೆಯನ್ನೇ ಕೊಂದ ಮಗ

Date:

  • ಮದ್ಯ ಸೇವನೆಗೆ ದುಡ್ಡು ಕೊಡದೆ ಇರುವುದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ
  • ನಗರದ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಮದ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ದುಷ್ಟ ಮಗನೊಬ್ಬ ತನ್ನ ತಂದೆಯನ್ನು ಕೊಂದಿರುವ ಘಟನೆ ಬೆಂಗಳೂರಿನ ಮಾರೇನಹಳ್ಳಿ ಪಿ.ಎಸ್ ಲೇಔಟ್​ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಬಸವರಾಜು(60) ಕೊಲೆಯಾದ ದುರ್ದೈವಿ. ಇವರು ಸೆಕ್ಯೂರಿಟಿಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಮಗ ನೀಲಧರ ಹತ್ಯೆಗೈದು ಬಂಧಿತನಾಗಿರುವ ಆರೋಪಿ. ಘಟನೆ ಸಂಬಂಧ ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪುತ್ರ ನೀಲಧರ ಆಟೋ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ತಂದೆ ಮತ್ತು ಮಗ ಇಬ್ಬರು ಒಂದೇ ಶೆಡ್‌ನಲ್ಲಿ ವಾಸವಾಗಿದ್ದರು. ಈ ವೇಳೆ, ತಂದೆಯ ಬಳಿ ಮಗ ಕುಡಿಯಲು ದುಡ್ಡು ಕೇಳಿದ್ದಾನೆ. ದುಡ್ಡು ಕೊಡದೆ ಇರುವ ಕಾರಣಕ್ಕೆ ಶೆಡ್‌ನಲ್ಲಿದ್ದ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ.

ಕೊಲೆಯಾದ 15 ದಿನಗಳ ಬಳಿಕ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಗೋವಿಂದರಾಜನಗರ ಠಾಣೆಯ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲಿಫ್ಟ್​​ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...