ಬೆಂಗಳೂರು | ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

Date:

  • ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆ

ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಬೇಸತ್ತು ಎರಡು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ‌(30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮೃತ ನಂದಿನಿ ಆರು ವರ್ಷದ ಹಿಂದೆ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ನಂದಿನಿ ಪತಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಏ.6ರಂದು ಪತಿ ಕೆಲಸಕ್ಕೆ ಹೋಗುವಾಗ ನಂದಿನಿ ಚಾಕಲೇಟ್‌ ತೆಗೆದುಕೊಂಡು ಬರುವಂತೆ ಹೇಳಿದ್ದರಂತೆ, ಮಧ್ಯಾಹ್ನವಾದರೂ ಪತಿ ಚಾಕಲೇಟ್ ತೆಗೆದುಕೊಂಡು ಬರದ ಕಾರಣ ಹಾಗೂ ಕರೆ ಮಾಡಿದರೂ ಸ್ವೀಕರಿಸದ ಕಾರಣ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ನಂದಿನಿ ಪತಿ ಸಾಯಂಕಾಲ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ನಂದಿನಿ ಬದುಕುಳಿಯಲಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಮೇಲ್ನೋಟಕ್ಕೆ ಚಾಕಲೇಟ್ ತಂದುಕೊಡದೇ ಇರುವುದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಪೊಲೀಸರು ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಬೆಂಗಳೂರು | ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ನಿವಾಸಿಗಳು : ಎಫ್‌ಐಆರ್‌ ದಾಖಲು

ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲಿದ ಮಕ್ಕಳು 140 ಜನರನ್ನು ಮತ್ತೆ...

‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರ ಕಡಿಯಲು ಅನುಮತಿ ನೀಡಿದ ಹೈಕೋರ್ಟ್‌

ನಮ್ಮ ಮೆಟ್ರೋ ಕಾಮಗಾರಿ ವಿಳಂಬವಾದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ ನಮ್ಮ ಮೆಟ್ರೋ ಸಾರ್ವಜನಿಕ...

ಬೆಂಗಳೂರು | ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

10 ದ್ವಿಚಕ್ರ ವಾಹನಗಳೊಂದಿಗೆ ಜೂ. 3ರಂದು ಆರೋಪಿಗಳ ಬಂಧನ ವಾಹನಗಳನ್ನು ಕಡಿಮೆ ಬೆಲೆಗೆ...