ಬೆಂಗಳೂರು | 150 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಳ್ಳನ ಬಂಧನ

Date:

ಬೆಂಗಳೂರಿನ ಮಡಿವಾಳ ಪ್ರದೇಶದ ಮಾರುತಿ ನಗರದಲ್ಲಿ ಮನೆಯೊಂದರಲ್ಲಿ ದರೋಡೆ ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬರೋಬ್ಬರಿ 150 ಪ್ರಕರಣಗಳಲ್ಲಿ ಆರೋಪಿಯಾಗಿರುವ ಅಂತಾರಾಜ್ಯ ಕಳ್ಳನೆಂದು ತಿಳಿದುಬಂದಿದೆ.

- Advertisement -

ಜನವರಿ 9ರಂದು ಮಾರುತಿ ನಗರದಲ್ಲಿ ದರೋಡೆ ನಡೆದಿತ್ತು. ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಬಂಧಿತ ಆರೋಪಿಯನ್ನು ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ಪಂಚಾಕ್ಷರಿ ಸಂಗಯ್ಯ ಸ್ವಾಮಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ತೆಲಂಗಾಣ, ಮಹಾರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕದಲ್ಲಿ ಒಟ್ಟು 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಆರೋಪಿಯನ್ನು ಮಡಿವಾಳದ ಮಾರುಕಟ್ಟೆ ಪ್ರದೇಶದಲ್ಲಿ ಬಂಧಿಸಲಾಗಿದೆ. ಅತನಿಂದ 181 ಗ್ರಾಮ್ ಚಿನ್ನ, 333 ಗ್ರಾಮ್ ಬೆಳ್ಳಿ ಹಾಗೂ 12.25 ಲಕ್ಷ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ಕು ರಾಜ್ಯಗಳಲ್ಲಿ ದರೋಡೆ ಮಾಡುತ್ತಿದ್ದ ಸ್ವಾಮಿ, ಐಷಾರಾಮಿ ಜೀವನ ನಡೆಸುತ್ತಿದ್ದ. ತನ್ನ ಗೆಳತಿಗೂ 3 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದ ಎಂದು ತಿಳಿದುಬಂದಿದೆ.

ಆರೋಪಿ ಸ್ವಾಮಿ 2003ರಲ್ಲಿ 15 ವರ್ಷದವನಿದ್ದಾಗಲೇ ಲ್ಯಾಪ್‌ಟಾಪ್ ಕದಿಯುತ್ತಿದ್ದ. ಆತನನ್ನು 2012ರಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ನಂತರ, ಜೈಲಿನಿಂದ ಬಿಡುಗಡೆಯಾಗಿದ್ದ. 2016ರಲ್ಲಿ, ಗುಜರಾತ್‌ನಲ್ಲಿ ದರೋಡೆ ಮಾಡಿದ್ದ ಆತನಿಗೆ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ, ಮತ್ತೆ ದರೋಡೆ ಆರಂಭಿಸಿದ್ದಾನೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...