ಬೆಂಗಳೂರು | ಬೊಲೆರೋ ವಾಹನದ ಸಮೇತ 2 ಟನ್ ಟೊಮ್ಯಾಟೊ ಕದ್ದ ಕಳ್ಳರು : ರೈತ ಕಂಗಾಲು

Date:

  • ಸುಮಾರು 200 ಟ್ರೇಗಳಲ್ಲಿದ್ದ ಟೊಮ್ಯಾಟೊ ಕಳೆದುಕೊಂಡ ರೈತ ಕಂಗಾಲು
  • ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ರಾಜ್ಯದಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಾದ ಬೆನ್ನಲ್ಲೆ ಕಳವು ಪ್ರಕರಣಗಳು ವರದಿಯಾಗುತ್ತಿದ್ದು, ಸುಮಾರು 2 ಟನ್‌ಗೂ ಹೆಚ್ಚು ಟೊಮ್ಯಾಟೊ ಇದ್ದ ಬೊಲೆರೋ ವಾಹನವನ್ನು ಕಳ್ಳರು ಕಳವುಗೈದು ಪರಾರಿಯಾಗಿದ್ದಾರೆ.

- Advertisement -

ಸೋಮವಾರ (ಜು.8)ದಂದು ನಗರದ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ. ಟೊಮ್ಯಾಟೊ ಬೆಳೆದ ರೈತ ಹಿರಿಯೂರಿನಿಂದ ಕೋಲಾರದ ಕಡೆಗೆ ಸಾಗಿಸುತ್ತಿದ್ದರು. ಈ ವೇಳೆ, ಕಾರಿನಲ್ಲಿ ಬಂದ ಮೂವರು ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ನಂತರ ಆರ್​​ಎಮ್​​ಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ವಾಹನವನ್ನು ಅಡ್ಡಗಟ್ಟಿ, ಪೀಣ್ಯ ಬಳಿ ನಿಮ್ಮ ಬೊಲೆರೋ ವಾಹನದಿಂದ ನಮ್ಮ ಗಾಡಿಗೆ ಟಚ್‌ ಮಾಡಿದ್ದೀರಿ ಎಂದು ಜಗಳ ಆರಂಭಿಸಿ, ಬೊಲೆರೋ ಚಾಲಕ ಮತ್ತು ರೈತನ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೊಬೈಲ್ ಕಿತ್ತುಕೊಂಡು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ನಂತರ ಟೊಮ್ಯಾಟೊ ಕಂಡ ಅವರು ಬೊಲೆರೋ ಸಮೇತ ಕದ್ದು, ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎರಡು ಟನ್ ಟೊಮ್ಯಾಟೊ ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಹಲವೆಡೆ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಹವಾಮಾನ ವೈಪರೀತ್ಯದಿಂದಾಗಿ ಕಳೆದ ಕೆಲವು ದಿನಗಳಿಂದ ತರಕಾರಿ ಬೆಲೆ ಏರಿಕೆಯಾಗುತ್ತಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು, ಕೆಜಿ ತೆಗೆದುಕೊಳ್ಳುವ ತರಕಾರಿಯನ್ನು ಅರ್ಧ ಕೆಜಿ ಮಾತ್ರ ತೆಗೆದುಕೊಳ್ಳುತ್ತಿದ್ದಾರೆ. ಟೊಮ್ಯಾಟೊ ಪ್ರತಿ ಕೆಜಿಗೆ ₹110 ಆಗಿದೆ. ಟೊಮ್ಯಾಟೊ ಬೆಲೆ ಗಗನಕ್ಕೇರಿರುವ ನಡುವೆಯೇ ಕಳವು ಪ್ರಕರಣಗಳು ಕೂಡ ವರದಿಯಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...