ಬೆಂಗಳೂರು | ಮತದಾನ ಪ್ರಮಾಣ ಶೇ. 75ಕ್ಕೆ ಏರಿಸುವ ಗುರಿ ಹೊಂದಲಾಗಿದೆ: ಜಿಲ್ಲಾ ಚುನಾವಣಾಧಿಕಾರಿ

Date:

  • 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ
  • ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಿ

ಬೆಂಗಳೂರಿನಲ್ಲಿ 95,13,830 ಲಕ್ಷ ಮತದಾರರಿದ್ದಾರೆ. ಆದರೆ, ಇಲ್ಲಿ ಮತದಾನ ಮಾಡುವವರ ಸಂಖ್ಯೆ ಕಡಿಮೆಯಿದೆ. ಈ ವರ್ಷ ಮತದಾನದ ಪ್ರಮಾಣವನ್ನು ಶೇ. 75ಕ್ಕೆ ಏರಿಸುವ ಗುರಿಯನ್ನು ಹೊಂದಿದ್ದು, ಅದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಮನವಿ ಮಾಡಿದರು.

ಬೊಮ್ಮನಹಳ್ಳಿ ವಲಯದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳೊಂದಿಗೆ ಬನ್ನೇರುಘಟ್ಟ ಮುಖ್ಯ ರಸ್ತೆಯ ಕ್ರೈಸ್ಟ್ ವಿದ್ಯಾಲಯದಲ್ಲಿ ಮಂಗಳವಾರ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಅವರು, “ನಗರದಲ್ಲಿ ಮತದಾನ ಮಾಡುವವರ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹಾಗಾಗಿ, ಎಲ್ಲರೂ ಮತದಾನದ ಪ್ರಾಮುಖ್ಯತೆಯನ್ನು ಅರಿತು ತಪ್ಪದೆ ಮತ ಚಲಾಯಿಸಬೇಕು. ಮತಗಟ್ಟೆಗಳ ಬಳಿಯಿರುವ ಸೌಲಭ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಜೊತೆಗೆ 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರು ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿರುವ ಬಗ್ಗೆಯೂ ಜನರಿಗೆ ತಿಳಿವಳಿಕೆ ನೀಡಬೇಕು” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಹೊಸ ಮತದಾನ ಗುರುತಿನ ಚೀಟಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ 28 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಚುನಾವಣಾ ದೂರು ಪಡೆಯಲು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆರೋಗ್ಯ ಮಾಹಿತಿಗಾಗಿ ಆನ್‌ಲೈನ್‌ನಲ್ಲಿ ಹೆಚ್ಚು ಹುಡುಕಾಟ ನಡೆಸುತ್ತಿರುವ ಯುವಕರು : ನಿಮ್ಹಾನ್ಸ್ ಅಧ್ಯಯನ

ಈ ವೇಳೆ, ಜನರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ “ಮತದಾನ ಸಂಕಲ್ಪ” ಎಂಬ ಜಾಗೃತಿ ನಾಟಕವನ್ನು ಪ್ರದರ್ಶಿಸಲಾಯಿತು. ನಾಟಕ ನಿರ್ದೇಶಕರಾದ ಟಿ.ಎನ್.ಬಾಲಕೃಷ್ಣ ಅವರ ನೇತೃತ್ವದಲ್ಲಿ ಬಿ.ಎಂ.ಟಿ.ಸಿ-ಕೆ.ಎಸ್.ಆರ್.ಟಿ.ಸಿಯ ತಂಡವು ನಾಟಕ ಪ್ರದರ್ಶಿಸಿತು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ, ವಲಯ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೇಕಿಂಗ್ ನ್ಯೂಸ್ | ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಐಷಾರಾಮಿ ಹೋಟೆಲ್‌ಗೆ ಬಾಂಬ್ ಬೆದರಿಕೆ

ಬೆಂಗಳೂರು ನಗರದ ತಾಜ್ ವೆಸ್ಟ್ ಎಂಡ್‌ ಐಷಾರಾಮಿ ಹೋಟೆಲ್‌ಗೆ ಇಮೇಲ್ ಮೂಲಕ...

ಬೆಂಗಳೂರು | ಆನ್‌ಲೈನ್ ಉದ್ಯೋಗದ ಹೆಸರಲ್ಲಿ 6 ಕೋಟಿ ವಂಚನೆ: 10 ಮಂದಿ ಆರೋಪಿಗಳ ಬಂಧನ

ಆನ್‌ಲೈನ್ ಉದ್ಯೋಗದ ಟಾಸ್ಕ್ ಹೆಸರಿನಲ್ಲಿ 6 ಕೋಟಿ ರೂಗಳು ವಂಚನೆ ನಡೆಸಿದ್ದ...

ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು

ಮಹಿಳೆಯೊಬ್ಬರು ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಎಸ್‌ಡಿಪಿಐ ಮುಖಂಡರೊಬ್ಬರು...

ಬೆಂಗಳೂರಿನಲ್ಲಿ ರೈಲಿಗೂ ‘ಟ್ರಾಫಿಕ್ ಜಾಮ್’ ಬಿಸಿ?; ವಿಡಿಯೋ ವೈರಲ್ – ಅಧಿಕಾರಿಗಳ ಸ್ಪಷ್ಟನೆ

ವಾಹನಗಳು ರೈಲು ಹಳಿಗಳನ್ನು ದಾಟುತ್ತಿದ್ದು, ಹಳಿಗಳ ಮೇಲೆ ರೈಲು ನಿಂತಿರುವ ವಿಡಿಯೋವೊಂದು...