ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡು, ಎರಡು ಕಾರುಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
“ಬೆಂಗಳೂರಿನ ಸ್ಪೆನ್ಸರ್ ರಸ್ತೆಯಲ್ಲಿ ಬೆಂಕಿಯ ರಭಸಕ್ಕೆ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದೆ. ಸುಮಾರು 30 ನಿಮಿಷಗಳ ಹಿಂದೆ ನಿಲ್ಲಿಸಿದ್ದ ಎರಡು ಕಾರುಗಳು ಸುಟ್ಟು ಕರಕಲಾಗಿವೆ. ಟ್ರಾನ್ಸ್‌ಫಾರ್ಮರ್ ಬದಲಾಯಿಸುವಂತೆ ಸ್ಥಳೀಯ ನಿವಾಸಿಗಳು ಬೆಸ್ಕಾಂಗೆ ಪದೇ ಪದೇ ದೂರು ನೀಡಿದ್ದರೂ, ಸಹ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪತ್ರಕರ್ತ ಬನ್ಸಿ ಕಾಳಪ್ಪ ಟ್ವೀಟ್ ಮಾಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.