ಬೆಂಗಳೂರು | ಕಾನೂನು ಉಲ್ಲಂಘಿಸಿದ ಇಬ್ಬರು ಇನ್ಸ್‌ಪೆಕ್ಟರ್‌ ಅಮಾನತು

Date:

  • ವೈದ್ಯರ ಮೇಲೆ ಜಾರ್ಜ್‌ಶೀಟ್‌ ಹಾಕಿದ್ದ ಇನ್ಸ್​​​​ಪೆಕ್ಟರ್​ ಮಂಜುನಾಥ್
  • ವೈದ್ಯರೊಬ್ಬರ ಮೇಲೆ ಡ್ರಗ್ಸ್‌ ಪ್ರಕರಣದಡಿ ಸುಳ್ಳು ಎಫ್ಐಆರ್ ದಾಖಲು

ಕಾನೂನು ದುರ್ಬಳಕೆ ಮಾಡಿಕೊಂಡ ಆರೋಪದಡಿ ಇಬ್ಬರು ಪೊಲೀಸರನ್ನು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಅಮಾನತು ಮಾಡಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಂಜುನಾಥ್ ಮತ್ತು ದೇವನಹಳ್ಳಿ ಠಾಣೆಯ‌ ಇನ್ಸ್​​​​ಪೆಕ್ಟರ್​ ಲಕ್ಷ್ಮಣ್ ನಾಯಕ್ ಅಮಾನತುಗೊಂಡವರು.

ಈ ಹಿಂದೆ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಇನ್ಸ್​​​ಪೆಕ್ಟರ್​ ಲಕ್ಷ್ಮಣ್ ನಾಯಕ್ ಅವರು ಇದ್ದರು. ಅವರ ಅವಧಿಯಲ್ಲಿ 2022ರಲ್ಲಿ ವೈದ್ಯರೊಬ್ಬರ ಮೇಲೆ ಡ್ರಗ್ಸ್‌ ಪ್ರಕರಣದಡಿ ಎಫ್ಐಆರ್ ದಾಖಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಅವರು ದೇವನಹಳ್ಳಿ ಠಾಣೆಗೆ ವರ್ಗಾವಣೆಯಾದ ನಂತರ ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರು ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸಕರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ; ಅಧಿಕಾರಿಗಳ ಅಮಾನತು

ವರ್ಗಾವಣೆ ಬಳಿಕ ಮಂಜುನಾಥ್ ಅವರು ವೈದ್ಯರ ಮೇಲೆ ಚಾರ್ಜ್‌ಶೀಟ್‌ ಹಾಕಿದ್ದರು. ಅಮಾಯಕ ವೈದ್ಯರ ಮೇಲೆ ಇಬ್ಬರು ಇನ್ಸ್‌ಪೆಕ್ಟರ್ ಸುಳ್ಳು ಪ್ರಕರಣ ದಾಖಲಿಸಿ ಬಳಿಕ ವೈದ್ಯರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಇಬ್ಬರು ಕಾನೂನು ಉಲ್ಲಂಘಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ವರದಿ ನೀಡಿದ್ದರು.

ಡಿಸಿಪಿ ಅವರು ನೀಡಿದ ವರದಿ ಆಧರಿಸಿ ಇಬ್ಬರೂ ಇನ್ಸ್‌ಪೆಕ್ಟರ್‌ ಅನ್ನು ಪೊಲೀಸ್‌ ಆಯುಕ್ತ ಬಿ ದಯಾನಂದ ಅಮಾನತು ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್‌ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು...

ಮೇ 31ರವರೆಗೆ ಬೆಂಗಳೂರಿಗೆ ಬರುವ ಕೆಲವು ರೈಲುಗಳು ರದ್ದು; ವಿವರ ಇಲ್ಲಿದೆ!

ಬೈಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯಪ್ಪನಹಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ...

ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ...