ಬೆಂಗಳೂರು | ದ್ವಿಚಕ್ರ ವಾಹನದ ಟೈರ್ ಸ್ಪೋಟ; ಹಾಫ್‌ ಹೆಲ್ಮೆಟ್‌ ಧರಿಸಿದ್ದ ಯುವತಿ ಸಾವು

Date:

  • ಸುಲೋಚನಾ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ
  • ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಏಪ್ರಿಲ್ 2ರಂದು ಸಂಜೆ ದ್ವಿಚಕ್ರ ವಾಹನದ ಟೈರ್ ಸ್ಪೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.

ಸುಲೋಚನಾ(24) ಮೃತ ದುರ್ದೈವಿ. ಏಪ್ರಿಲ್ 2ರಂದು ಬೈಕ್‌ನಲ್ಲಿ ಯುವಕ-ಯುವತಿಯರಿಬ್ಬರು ಚಲಿಸುತ್ತಿದ್ದರು. ಬೈಕ್‌ನ ಟೈರ್‌ ಸ್ಪೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏ.3ರಂದು ಯುವತಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಹಾಫ್‌ ಹೆಲ್ಮೆಟ್‌ ಧರಿಸಿರುವುದು ಪ್ರಮುಖ ಕಾರಣವಾಗಿದೆ. ಪೂರ್ಣ ಹೆಲ್ಮೆಟ್ ಧರಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂದ್ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇಬ್ಬರು ಸಾಫ್ಟ್’ವೇರ್ ಇಂಜಿನಿಯರ್‌ಗಳಾಗಿದ್ದು, ಏಪ್ರಿಲ್ 2ರಂದು ಕೆಲಸ ಮುಗಿಸಿ ಕೋರಮಂಗಲದಿಂದ ಹೊಸಕೆರೆಹಳ್ಳಿ ನೈಸ್ ರಸ್ತೆ ಮೂಲಕ ಮನೆಗೆ ತೆರಳುತ್ತಿದ್ದರು.

ಈ ಸುದ್ದಿ ಓದಿದ್ದೀರಾ? Beautiful Bengaluru | ನಗರದ ಅಂದ ಹೆಚ್ಚಿಸಿದ ತಬುಬಿಯಾ ಬಂದದ್ದು ಎಲ್ಲಿಂದ? ಇಲ್ಲಿದೆ ನೋಡಿ

ಸುಲೋಚನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಬಿಬಿಎಂಪಿ | ಸಾರ್ವಜನಿಕ ಶೌಚಾಲಯ ನಿರ್ಮಿಸಲು ಸ್ಥಳಗಳ ಪಟ್ಟಿ ಸಿದ್ಧಪಡಿಸಿ: ತುಷಾರ್ ಗಿರಿನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು....

ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಮುದುವೆಯಾಗುವುದಾಗಿ ನಂಬಿಸಿ 7 ತಿಂಗಳ ಗರ್ಭಿಣಿಯಾದ...

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು...