ಬೆಂಗಳೂರು | ನೀರಿನ ಸಂಪ್‌ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

Date:

ನೀರಿನ ಸಂಪ್‌ ಸ್ವಚ್ಛ ಮಾಡಲು ಕೆಳಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ.

- Advertisement -

ಚಂದನ್ ರಾಜ್​ಬನ್ ಸಿಂಗ್(31), ಪಿಂಟು ರಾಜ್​ಬನ್(22) ಮೃತ ಕೂಲಿ ಕಾರ್ಮಿಕರು. ಇವರು ಬಿಹಾರ ಮೂಲದವರಾಗಿದ್ದು, ಇಬ್ಬರು ಸಹೋದರರು ಎಂದು ತಿಳಿದುಬಂದಿದೆ. ಬುಧವಾರ ಸಂಜೆ ನೀರಿನ ಸಂಪ್‌ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಅಸ್ವಸ್ಥಗೊಂಡಿರುವ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ತಿರುಪಾಳ್ಯ ಗ್ರಾಮದಲ್ಲಿ ಶ್ರೀನಿವಾಸ ರೆಡ್ಡಿ ಎಂಬುವವರಿಗೆ ಸೇರಿದ ಸನ್​ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ಇಬ್ಬರು ಕಾರ್ಮಿಕರು ಆ್ಯಸಿಡ್ ಹಾಕಿ ನೀರಿನ ಸಂಪ್ ಸ್ವಚ್ಛ ಮಾಡುತ್ತಿದ್ದರು. ಸಂಪ್ ಸ್ವಚ್ಛ ಮಾಡುವ ವೇಳೆ, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ನೀರಿನ ಸಂಪ್​ನಲ್ಲೇ ಮೃತಪಟ್ಟಿದ್ದಾರೆ. ಇದನ್ನು ಕಂಡು ಕಾರ್ಮಿಕರ ರಕ್ಷಣೆಗೆ ಮುಂದಾಗಿದ್ದ ಕಂಪನಿ ಮಾಲೀಕ ಶ್ರೀನಿವಾಸರೆಡ್ಡಿ ಮತ್ತು ಕಾರ್ಮಿಕ ಜಗದೀಶ್‌ ಕೂಡ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಉಳಿದ ಕಾರ್ಮಿಕರು ಈ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿದ್ಯುತ್ ತಗುಲಿ ತಾಯಿ-ಮಗು ಸಾವು; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೃದಯದ ಮೇಲಿದ್ದ ಬೃಹತ್ ಗಡ್ಡೆ ಯಶಸ್ವಿ ತೆರವು; ಬಾಗಲಕೋಟೆಯ ಕೆರೂಡಿ ಆಸ್ಪತ್ರೆ ವೈದ್ಯರ ಅಪರೂಪದ ಸಾಧನೆ

ಎದೆಯ ಮಧ್ಯಭಾಗದಲ್ಲಿ ಬೆಳೆದು ಹೃದಯದ ಮೇಲೆ ತೀವ್ರ ಒತ್ತಡ ಉಂಟುಮಾಡುತ್ತಿದ್ದ ಬೃಹತ್...

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...