ಬೆಂಗಳೂರು | ಜೂನ್‌ನಿಂದ್‌ ಉಬರ್ ಇ ವಿ ಕ್ಯಾಬ್ ಸೇವೆ

Date:

Advertisements
  • ಏಳು ನಗರಗಳಲ್ಲಿ ಒಟ್ಟು 25 ಸಾವಿರ ಇ ವಿಗಳ ಸೇವೆ
  • ಇ ವಿ ಸೇವೆ ಮುಂದಿನ ದಿನಗಳಲ್ಲಿ ನಾನಾ ನಗರಗಳಿಗೆ ವಿಸ್ತರಣೆ

ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ಇದೀಗ ನಗರದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಉಬರ್ ಇ ವಿ (ಎಲೆಕ್ಟ್ರಿಕ್ ವೆಹಿಕಲ್) ಕ್ಯಾಬ್ ಸೇವೆ ಆರಂಭವಾಗಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾ ಅಧ್ಯಕ್ಷ ಪ್ರಭಜೀತ್ ಸಿಂಗ್, “ಜೂನ್‌ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಇ ವಿ ಕ್ಯಾಬ್‌ ಸೇವೆ ಆರಂಭವಾಗಲಿದೆ. ಈ ಸೇವೆ ಅಧಿಕೃತವಾಗಿ ಆರಂಭವಾದ ಬಳಿಕ ಉಬರ್‌ ಗ್ರಾಹಕರು, ಕ್ಯಾಬ್‌ ಸೇವೆ ಪಡೆಯುವ ಸಮಯದಲ್ಲಿ ಇ ವಿ ಕ್ಯಾಬ್‌ ಸೇವೆ ಬೇಕೆಂದು ಬೇಡಿಕೆ ಸಲ್ಲಿಸಬಹುದು” ಎಂದರು.

“ಇ ವಿ ಕ್ಯಾಬ್‌ ಸೇವೆಯೂ ಬೆಂಗಳೂರು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನಾನಾ ನಗರಗಳಿಗೆ ವಿಸ್ತರಿಸಲಾಗುವುದು. ಬೆಂಗಳೂರು ನಂತರ ಮುಂಬೈ ಹಾಗೂ ದೆಹಲಿಯಲ್ಲಿಯೂ ಆರಂಭವಾಗಲಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮೊದಲ ಬಾರಿಗೆ ₹8000 ಕೋಟಿ ಆದಾಯ ದಾಟಿದ ನೈರುತ್ಯ ರೈಲ್ವೆ ಇಲಾಖೆ

“ಉಬರ್‌ಗೆ ಪ್ರಮುಖವಾಗಿರುವ ಏಳು ನಗರಗಳಲ್ಲಿ ಒಟ್ಟು 25 ಸಾವಿರ ಇ ವಿಗಳ ಸೇವೆ ನೀಡಲಾಗುವುದು. ಜಿಯೊ–ಬಿಪಿ ಹಾಗೂ ಜಿಎಂಆರ್ ಗ್ರೀನ್ ಜೊತೆಗೆ ಇ ವಿ ಕ್ಯಾಬ್‌ಗಳಿಗೆ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲು ಒಪ್ಪಂದ ಮಾಡಲಾಗಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X