ಬೆಂಗಳೂರು | ಬಿರುಗಾಳಿ ಸಹಿತ ಮಳೆ; ವಿಮಾನ ಹಾರಾಟದಲ್ಲಿ ವ್ಯತ್ಯಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸುರಿದ ಕಾರಣ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಗೆ ಆಗಮಿಸುತ್ತಿದ್ದ 14 ವಿಮಾನಗಳು ಸಂಚಾರ ಮಾರ್ಗ ಬದಲಾಯಿಸಿವೆ.

ಹವಾಮಾನ ವೈಪರೀತ್ಯದಿಂದಾಗಿ ಒಟ್ಟು 14 ವಿಮಾನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದ್ದು, ಬೆಂಗಳೂರಿನಿಂದ ವಿವಿಧೆಡೆ ಸಂಚರಿಸಬೇಕಿದ್ದ 6 ವಿಮಾನಗಳು ತಡವಾಗಿ ಹೊರಟಿವೆ. ಮಂಗಳವಾರ ಸಂಜೆ 4.05 ರಿಂದ 4.50ರ ವರೆಗೆ ವಿಮಾನ ಸಂಚಾರ ವ್ಯತ್ಯಯವಾಗಿತ್ತು.

ಚೆನ್ನೈ, ಹೈದರಾಬಾದ್,​ ಕೋಲ್ಕತ್ತಾ, ಜೋಧ್​ಪುರ​, ಮುಂಬೈ, ರಾಜ್​ಕೋಟ್​​, ದುಬೈ, ಪಾಟ್ನಾ, ಬರೇಲಿ ಮತ್ತು ಇಂದೋರ್​​ನಿಂದ ಬರುತ್ತಿದ್ದ ವಿಮಾನಗಳನ್ನು ಬೇರೆ ವಿಮಾನ ನಿಲ್ಧಾಣಗಳಿಗೆ ಕಳುಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾನಾಕಡೆಗೆ ತೆರಳಬೇಕಿದ್ದ ವಿಮಾನಗಳಲ್ಲೂ ವ್ಯತ್ಯಯ ಉಂಟಾಗಿದೆ. ಮಳೆಯಿಂದಾಗಿ ವಿಮಾನದಲ್ಲೇ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು.

ಜನಜೀವನ ಅಸ್ತವ್ಯಸ್ತ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಒಂದು ಗಂಟೆ ಕಾಲ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೆಂಪೇಗೌಡ ಸರ್ಕಲ್ ಬಳಿ ನಾಲ್ಕು ಅಡಿಗೂ ಹೆಚ್ಚು ನೀರು ನಿಂತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಮಳೆಯಿಂದ ರಸ್ತೆಗಳು ಸಂಪೂರ್ಣ ತುಂಬಿಹೋಗಿದ್ದು, ಸಂಚರಿಸಲು ರಸ್ತೆ ಕಾಣದೆ ವಾಹನ ಸವಾರರು ಪರದಾಡುವಂತಾಯಿತು.

ಮಂಗಳವಾರ ನಗರದ ಕೆಆರ್ ಮಾರ್ಕೆಟ್‌, ರಿಚ್ಮಂಡ್‌ ಸರ್ಕಲ್‌, ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ.

ಏಪ್ರಿಲ್ 5 ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ದಕ್ಷಿಣ ಒಳನಾಡು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಭ್ರೂಣಲಿಂಗ ಹತ್ಯೆ ಪ್ರಕರಣ: ಮತ್ತೋರ್ವ ನರ್ಸ್​​ ಬಂಧನ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ...

ತೆಲಂಗಾಣ | ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಸಿಎಂ ಕೆಸಿಆರ್

ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದೆ. ಬಹುತೇಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು...

ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಭಾರತ್ ಮತ್ತು ಆಸ್ಟ್ರೇಲೀಯಾ ಟಿ-20 ಪಂದ್ಯದ ವೇಳೆ ಪಾಕಿಸ್ತಾನದ ಪರ ಘೋಷಣೆ...

ಮಂಡ್ಯ ಭ್ರೂಣಹತ್ಯೆ ಪ್ರಕರಣ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ ನರ್ಸ್‌

ಭ್ರೂಣಹತ್ಯೆ ಕುರಿತ ಹಲವಾರು ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ...