ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ಎಕ್ಸ್‌ನಲ್ಲಿ ಅಭಿಯಾನ ಆರಂಭ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತ, ವ್ಹೀಲಿಂಗ್ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ತಡೆಗಟ್ಟಲು ದಕ್ಷಿಣ ವಿಭಾಗದ ಸಂಚಾರ ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ಅವರು ಟ್ವಿಟರ್‌ನಲ್ಲಿ- ಎಕ್ಸ್‌ನಲ್ಲಿ #DCPSOUTHLISTENS (ಡಿಸಿಪಿ ಸೌಥ್ ಲಿಸನ್ಸ್‌) ಎಂಬ ಹ್ಯಾಶ್‌ಟ್ಯಾಗ್ ಮೂಲಕ ಅಭಿಯಾನ ಆರಂಭಿಸಿದ್ದಾರೆ.

ಈ ಅಭಿಯಾನದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವೀಡಿಯೊಗಳನ್ನು ರೆಕಾರ್ಡ್ ಮಾಡಿ ಅವುಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸಿದ್ದಾರೆ.

“ಈ ಅಭಿಯಾನವು ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆಗಳನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಹೆಚ್ಚುತ್ತಿರುವ ಬೈಕ್ ಸ್ಟಂಟ್‌ಗಳು ಮತ್ತು ರೋಡ್ ರೇಜ್ ಘಟನೆಗಳ ನಿಯಂತ್ರಣಕ್ಕಾಗಿ ಸಂಚಾರ ಪೊಲೀಸರು ಪ್ರತಿನಿತ್ಯ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಆದರೂ, ಹೆಚ್ಚು ಪರಿಣಾಮಕಾರಿ ನಿರ್ವಹಣೆಯ ಅಗತ್ಯವನ್ನು ಗುರುತಿಸಿ, ಆನ್‌ಲೈನ್ ಅಭಿಯಾನವನ್ನು ಪರಿಚಯಿಸಲಾಗಿದೆ” ಎಂದು ಶಿವಪ್ರಕಾಶ ದೇವರಾಜು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹೊಸ ವರ್ಷಾಚರಣೆ ಸಮೀಪಿಸುತ್ತಿರುವುದರಿಂದ ಬೈಕ್ ಸ್ಟಂಟ್‌ಗಳು ಮತ್ತು ಕುಡಿದು ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚಾಗಲಿವೆ. ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ರಸ್ತೆ ತೊಂದರೆಗಳು ಗಂಭೀರ ಅಪಾಯವಾಗುವುದನ್ನು ತಡೆಯಲು ನಿರ್ದಿಷ್ಟ ಹ್ಯಾಶ್‌ಟ್ಯಾಗ್ ಅನ್ನು ಪರಿಚಯಿಸಲಾಗಿದೆ” ಎಂದು ಹೇಳಿದರು.

“ಇಲಾಖೆಯಿಂದ ಸುಮಾರು 30 ಸಿಬ್ಬಂದಿ ಪ್ರಸ್ತುತ ದೂರುಗಳ ಮೇಲ್ವಿಚಾರಣೆಯಲ್ಲಿ ತೊಡಗಿದ್ದಾರೆ. ಅಧಿಕೃತವಾಗಿ ದೂರು ದಾಖಲಿಸುವ ಮೊದಲು ರೆಕಾರ್ಡಿಂಗ್ ಅನ್ನು ಪರಿಶೀಲಿಸುತ್ತಿದ್ದಾರೆ. ಮುಂದಿನ ಕ್ರಮ ಕೈಗೊಳ್ಳುವ ಮೊದಲು ಪ್ರತಿ ದೂರನ್ನು ಕೂಲಂಕಷವಾಗಿ ಪರಿಶೀಲಿಸಿ, ಮೌಲ್ಯೀಕರಿಸಲಾಗುತ್ತದೆ. ಇದು ಪ್ರಕ್ರಿಯೆಯಾಗಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ | ‘ನಮ್ಮ ಕಾರ್ಗೋ-ಟ್ರಕ್ ಸೇವೆ’ ಯೋಜನೆಗೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ

“ಅಭಿಯಾನದ ಅಂಗವಾಗಿ ಗುರುವಾರ 59 ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಂಗಳವಾರ ಮತ್ತು ಬುಧವಾರದ ನಡುವೆ ಅಜಾಗರೂಕತೆಯಿಂದ ಚಾಲನೆ ಮಾಡಿದ 51 ಪ್ರಕರಣಗಳು ದಾಖಲಾಗಿವೆ. 692 ವಾಹನಗಳನ್ನು ಪರೀಕ್ಷಿಸಲಾಯಿತು. ಕುಡಿದು ವಾಹನ ಚಲಾಯಿಸಿದ 28 ಪ್ರಕರಣಗಳನ್ನು ದಾಖಲಾಗಿವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...