ಬೆಂಗಳೂರು | ಸೇಡು ತೀರಿಸಿಕೊಳ್ಳಲು ಪತಿ ಮೊಬೈಲ್‌ನಿಂದ ಬಾಂಬ್‌ ಬೆದರಿಕೆ ಸಂದೇಶ ರವಾನಿಸಿದ ಪತ್ನಿ: ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಪತಿ ಮೇಲೆ ಸೇಡು ತೀರಿಸಿಕೊಳ್ಳಲು ಪತ್ನಿಯೊಬ್ಬರು ಪೊಲೀಸರಿಗೆ ಮತ್ತು ತನಿಖಾ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಸದ್ಯ ಈಕೆಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ವಿದ್ಯಾರಾಣಿ (36) ಬಂಧಿತ ಮಹಿಳೆ. ಇವರು ಮೂಲತಃ ಮಹಾರಾಷ್ಟ್ರದ ಸಾಂಗ್ಲಿಯವರು. ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬನ್ನಿಹಟ್ಟಿಯ ಕಿರಣ್ ಎಂಬುವವರನ್ನು ಕಳೆದ 13 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬೆಂಗಳೂರಿನ ನೇಕಾರ್ ಕಂಪನಿಯೊಂದರಲ್ಲಿ ಮ್ಯಾನೇಜರ್‌ ಆಗಿ ಕಿರಣ್ ಕಳೆದ ಒಂದೂವರೆ ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆ, ದಂಪತಿ ಬೆಂಗಳೂರಿನ ಆನೇಕಲ್‌ನ ಮಾರುತಿ ಬಡಾವಣೆಯಲ್ಲಿ ವಾಸವಾಗಿತ್ತು.

ಏನಿದು ಪ್ರಕರಣ?

ಕಳೆದ 6 ತಿಂಗಳ ಹಿಂದೆ ಉದ್ಯೋಗ ಹುಡುಕುವ ‘ಅಪ್ನಾ’ ಆ್ಯಪ್‌ ಮೂಲಕ ವಿದ್ಯಾರಾಣಿ ಅವರಿಗೆ ಬಿಹಾರ ಮೂಲದ ರಾಮ್‌ ಪ್ರಸಾದ್ (38) ಎಂಬುವರ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು‌. ಇವರಿಬ್ಬರೂ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. ಕ್ರಮೇಣ ಇವರ ಸಂಪರ್ಕ ಪ್ರೀತಿಗೆ ತಿರುಗಿದೆ.

ಈ ಬಗ್ಗೆ ವಿದ್ಯಾರಾಣಿ ಪತಿ ಕಿರಣ್‌ಗೆ ತಿಳಿದು ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಒಂದು ದಿನ ಕೋಪಗೊಂಡ ಪತಿ ವಿದ್ಯಾರಾಣಿ ಮೊಬೈಲ್‌ ಒಡೆದುಹಾಕಿದ್ದಾರೆ.

ಇದರಿಂದ ಪತಿ ಮೇಲೆ ಸೇಡು ತೀರಿಸಿಕೊಳ್ಳಲು ವಿದ್ಯಾರಾಣಿ, ಮತ್ತೊಂದು ಮೊಬೈಲ್‌ ಫೋನ್‌ ಖರೀದಿಸಿ ಸ್ನೇಹಿತ ರಾಮಪ್ರಸಾದ್‌ ಅವರೊಂದಿಗೆ ಸಂಪರ್ಕ ಬೆಳೆಸಿದ್ದರು.

ಕಿರಣ್‌ನನ್ನು ಪೊಲೀಸ್‌ ಪ್ರಕರಣದಲ್ಲಿ ಸಿಲುಕಿಸಲು ರಾಮಪ್ರಸಾದ್‌ ಸಂಚು ರೂಪಿಸಿ, ಹಲವೆಡೆ ಆರ್‌ಡಿಎಕ್ಸ್‌ ಬಾಂಬ್‌ ಹಾಕಲಾಗಿದೆ ಎಂಬ ಬೆದರಿಕೆ ಸಂದೇಶವನ್ನು ವಿದ್ಯಾರಾಣಿಗೆ ಕಳುಹಿಸಿದ್ದನು. ವಿದ್ಯಾರಾಣಿ ತನ್ನ ಪತಿ ಮೊಬೈಲ್‌ನಿಂದ ಪೊಲೀಸರಿಗೆ ಮತ್ತು ಕೇಂದ್ರ ತನಿಖಾ ತಂಡಕ್ಕೆ ಬಾಂಬ್‌ ಹಾಕುವ ಸಂದೇಶ ರವಾನಿಸಿದ್ದಳು.

ಈ ಸುದ್ದಿ ಓದಿದ್ದೀರಾ? ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಈ ಘಟನೆ ನಡೆದ ದಿನ, ಡಿಸೆಂಬರ್ 1ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಹೀಗಾಗಿ, ಈ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದ, ಪೊಲೀಸರು ನಂಬರ್‌ ಮತ್ತು ಐಪಿ ಆಡ್ರಸ್‌ ಆಧರಿಸಿ ಆನೇಕಲ್‌ನ ಮನೆಗೆ ಬಂದು ದಂಪತಿಯನ್ನು ವಶಕ್ಕೆ ಪಡೆದು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದರು.

ವಿಚಾರಣೆ ವೇಳೆ, ವಿದ್ಯಾರಾಣಿ ತನ್ನ ಪತಿಯ ಮೊಬೈಲ್‌ನಿಂದ ತನಿಖಾ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವುದು ಬಯಲಾಗಿದೆ. ಸದ್ಯ ಆರೋಪಿ ವಿದ್ಯಾರಾಣಿಯನ್ನು ಬಂಧಿಸಿರುವ ಪೊಲೀಸರು, ಬಿಹಾರ ಮೂಲದ ರಾಮಪ್ರಸಾದ್‌ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...