ಬೆಂಗಳೂರು | ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

Date:

  • ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
  • ಏಕಾಏಕಿ ಅಪಾರ್ಟ್‌ಮೆಂಟ್‌ ಮೇಲಿಂದ ಹಾರಿ ಕೆಳಗೆ ಬಿದ್ದ ಮಹಿಳೆ

ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಲಖೌನ ಮೂಲದ ಅಮೃತಾ ಶರ್ಮ (27) ಮೃತಪಟ್ಟ ಮಹಿಳೆ. ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದಳು. ಜೂನ್ 22ರಂದು ರಾತ್ರಿ 10 ಗಂಟೆಗೆ ಈ ಘಟನೆ ನಡೆದಿದೆ. ಮಹಿಳೆ ಏಕಾಏಕಿ ಮೇಲಿಂದ ಹಾರಿ ಕೆಳಗೆ ಬಿದ್ದಿದ್ದಾಳೆ. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಿಳೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದರು. ಈಕೆ ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದರು. ರಾತ್ರಿ ವೇಳೆ ಎಲ್ಲರೂ ಮನೆಯಲ್ಲಿರುವಾಗ ಈಕೆ ಅಡುಗೆ ಮನೆಯ ಬಾಲ್ಕನಿಯಲ್ಲಿದ್ದರು. ಈ ವೇಳೆ ಘಟನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದಿನದ 24 ಗಂಟೆಯೂ ಹೋಟೆಲ್ ತೆರೆಯಲು ಅನುಮತಿ ನೀಡಿ ಎಂದ ಬಿಬಿಎಚ್ಎ

ಇತ್ತೀಚಿಗೆ ಮಹಿಳೆಯು ತನ್ನ ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದರು. ಸದ್ಯ ಮೃತಳ ತಾಯಿ ಲಖನೌನಿಂದ ಬೆಂಗಳೂರಿಗೆ ಆಗಮಿಸುತಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲ ಹಂತದ ವೈಟ್ ಟಾಪಿಂಗ್ ಕಾಮಗಾರಿಗೆ ಡಿ ಕೆ ಶಿವಕುಮಾರ್ ಚಾಲನೆ‌

'ಬ್ರ್ಯಾಂಡ್ ಬೆಂಗಳೂರು - ಸುಗಮ ಸಂಚಾರ ಬೆಂಗಳೂರು' ಪರಿಕಲ್ಪನೆಯಡಿ ಪಶ್ಚಿಮ ವಲಯ...

ನಮ್ಮ ಮೆಟ್ರೋದಲ್ಲಿ ಟಿಕೆಟ್ ಖರೀದಿಸದೆ ಪ್ರಯಾಣಿಸಿದ್ದ ಯೂಟ್ಯೂಬರ್ ಈಗ ಯುರೋಪ್ ಸಂಸದ!

ಕಳೆದ ವರ್ಷ ನಮ್ಮ ಮೆಟ್ರೋದಲ್ಲಿ ಟಿಕೆಟ್ ತೆಗೆಯದೆ ಉಚಿತವಾಗಿ ಪ್ರಯಾಣಿಸಿ ಸುದ್ದಿಯಾಗಿದ್ದ...

ಕರ್ನಾಟಕದ 148 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೆರವಾಗುತ್ತಿದೆ ಎಬಿಬಿ ಇಂಡಿಯಾ

ಒಳಗೊಳ್ಳುವಿಕೆಯ ಮತ್ತು ಸಮಾನ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಎಬಿಬಿ ಇಂಡಿಯಾ ತನ್ನ...

ಕೋಲಾರ | ಬಸ್‌ ಅಪಘಾತ; ಬೆಂಗಳೂರಿಂದ ತಿರುಪತಿಗೆ ಹೊರಟ್ಟಿದ್ದವರು ದಾರುಣ ಸಾವು

ಬೆಂಗಳೂರಿನಿಂದ ತಿರುಪತಿಗೆ ಹೊರಟ್ಟಿದ್ದ ಬಸ್‌ ಅಪಘಾತಕ್ಕೀಡಾಗಿದ್ದು, 9 ಮಂದಿ ಮೃತಪಟ್ಟಿರುವ ದುರ್ಘಟನೆ...