ಬೆಂಗಳೂರು | ಅಪಾರ್ಟ್‌ಮೆಂಟ್‌ನಿಂದ ಆಯತಪ್ಪಿ ಬಿದ್ದು ನವವಿವಾಹಿತೆ ಸಾವು

Date:

ಅಪಾರ್ಟ್‌ಮೆಂಟ್​ನ 5ನೇ ಮಹಡಿಯಿಂದ ಆಯತಪ್ಪಿ ಬಿದ್ದು ನವವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ.

ಖುಷ್ಬೂ ಅಶೀಷ್ ತ್ರಿವೇದಿ(31) ಮೃತ ದುರ್ದೈವಿ. ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಾಗಿರಿ ಅಪಾರ್ಟ್‌ಮೆಂಟ್‌ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆರೆಂದು ತಿಳಿದುಬಂದಿದ್ದು, ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದು, ದೊಡ್ಡಬನಹಳ್ಳಿಯ ವಿಂಧ್ಯಾಗಿರಿ ಅಪಾರ್ಟಮೆಂಟ್​ನ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಆದರೆ, ಭಾನುವಾರ ಬೆಳಿಗ್ಗೆ ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ಖುಷ್ಬೂ ಅವರನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್‌ನಲ್ಲಿ ಅಪಘಾತ; ಗೇಟ್ ತೆರವುಗೊಳಿಸಲು ಆಗ್ರಹ

ಘಟನೆಯ ಸಂಬಂಧ ಕಾಡುಗೋಡಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...

ದಾವಣಗೆರೆ | ಜಾತ್ಯತೀತ ಪಕ್ಷಕ್ಕೆ ಮತ ಹಾಕುವಂತೆ ಮಾನವ ಬಂಧುತ್ವ ವೇದಿಕೆ ಮನವಿ

ಮತದಾನದ ಹಕ್ಕು ಸಂವಿಧಾನ ನೀಡಿರುವ ಅತ್ಯಂತ ಶ್ರೇಷ್ಟವಾದದ್ದು ಮತ್ತು ಪವಿತ್ರವಾದ ಅವಕಾಶ....