ಚರಂಡಿಯಲ್ಲಿ ಭಾರೀ ವಾಸನೆ ಬರುತ್ತಿದ್ದ ಕಾರಣ, ಇಲಿ ಸತ್ತಿರಬಹುದೆಂದು ಪೌರ ಕಾರ್ಮಿಕರು ಚರಂಡಿ ಸ್ವಚ್ಛತೆಗೆ ಇಳಿದಿದ್ದು, ಚರಂಡಿಯಲ್ಲಿ ಕೊಲೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸುಮಾರು 35 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೃತದೇಹವು ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಮೂರು ದಿನಗಳಿಂದ ಚರಂಡಿಯ ಬಳಿ ಕೆಟ್ಟ ವಾಸನೆ ಬರುತ್ತಿತ್ತು. ಚರಂಡಿ ಸ್ವಚ್ಛಗೊಳಿಸುವಂತೆ ಸ್ಥಳೀಯರು ಗ್ರಾಮ ಪಂಚಾಯತಿಗೆ ದೂರು ನೀಡಿದ್ದರು. ಪೌರ ಕಾರ್ಮಿಕರು ಚರಂಡಿಯನ್ನು ಸ್ವಚ್ಛಗೊಳಿಸಲು ಬಂದಾಗ, ಮೊದಲಿಗೆ ಮಹಿಳೆಯ ಕಾಲು ಕಾಣಿಸಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನನ್ನು ಹೊರತೆಗೆದಿದ್ದಾರೆ.
ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೇರೊಂದು ಪ್ರದೇಶದಲ್ಲಿ ಕೊಲೆ ಮಾಡಿ, ಸರ್ಜಾಪುರದಲ್ಲಿ ತಂದು ಬಿಸಾಡಿಬಹುದೆಂದು ಪೊಲೀಸರು ಶಂಕಿಸಿದ್ದಾರೆ.