ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

Date:

  • ಆರ್‌.ವಿ.ರಸ್ತೆ-ಬೊಮ್ಮಸಂದ್ರವರೆಗೆ 18.82ಕಿ.ಮೀ ಉದ್ದ ಮೆಟ್ರೋ ಮಾರ್ಗ
  • ಈ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆ

ಬೆಂಗಳೂರಿನ ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವು ಮೂರು ತಿಂಗಳಲ್ಲಿ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಹಳದಿ ಮಾರ್ಗವು ಉತ್ತರ-ದಕ್ಷಿಣ (ನಾಗಸಂದ್ರ-ಸಿಲ್ಕ್ ಇನ್‌ಸ್ಟಿಟ್ಯೂಟ್) ಮತ್ತು ಪೂರ್ವ-ಪಶ್ಚಿಮ (ಬೈಯಪ್ಪನಹಳ್ಳಿ-ಕೆಂಗೇರಿ) ಕಾರಿಡಾರ್‌ಗಳನ್ನು ಒಳಗೊಂಡಿರಲಿದೆ.

ಮೆಟ್ರೋ 2 ನೇ ಹಂತದ ಯೋಜನೆಯಡಿ ಆರ್‌.ವಿ.ರಸ್ತೆ-ಬೊಮ್ಮಸಂದ್ರ ಹಾಗೂ ಗೊಟ್ಟಿಗೆರೆ-ನಾಗವಾರ ಮಾರ್ಗವು (ಗುಲಾಬಿ ಮಾರ್ಗ) ಹಾದು ಹೋಗುವ ಇಂಟರ್‌ಚೇಂಜ್‌ ನಿಲ್ದಾಣವು ಜಯದೇವ ಆಸ್ಪತ್ರೆ ಬಳಿ ನಿರ್ಮಾಣವಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಳದಿ ಮಾರ್ಗದಲ್ಲಿ ಹೆಚ್ಚಿನ ಹಳಿಗಳ ಜೋಡಣೆ ಕಾರ್ಯ ಪೂರ್ಣಗೊಂಡಿದೆ. ಆದರೆ, ನಿಲ್ದಾಣಗಳು ಬಳಕೆಗೆ ಸಿದ್ಧವಾಗಬೇಕಾಗಿದೆ. ಎಲ್ಲವೂ ಸರಿಯಾಗಿ ನಡೆದರೆ, ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಆರಂಭದಲ್ಲಿ ಮಾರ್ಗವನ್ನು ತೆರೆಯಲಾಗುವುದು” ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ಹೇಳಿದರು.

ಈ ಮಾರ್ಗವು ನಗರದ ಮೊದಲ ಡಬಲ್ ಡೆಕ್ಕರ್ ಮೇಲ್ಸೇತುವೆಯನ್ನು ಒಳಗೊಂಡಿರುತ್ತದೆ. ಅಲ್ಲಿ ಎರಡು ಹಂತದ ಸೇತುವೆಯು ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ 3.3 ಕಿಮೀವರೆಗೆ ಚಲಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

ಆರ್‌.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗೆ 18.82 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಿಸಲಾಗಿದೆ. ಇದಕ್ಕೆ ಹಳದಿ ಬಣ್ಣದ ಮಾರ್ಗವೆಂದು ಹೆಸರಿಡಲಾಗಿದೆ. ಈ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆ.

ಆರ್‌.ವಿ.ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್‌, ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್‌, ಸಿಂಗಸಂದ್ರ, ಹೊಸ ರಸ್ತೆ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಇನ್ಫೋಸಿಸ್‌ ಫೌಂಡೇಶನ್‌ ಕೋನಪ್ಪನ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರದಲ್ಲಿ ಒಟ್ಟು 16 ನಿಲ್ದಾಣಗಳು ಇರಲಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...