ಬೆಂಗಳೂರು | ಯಶವಂತಪುರ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ; 2025ಕ್ಕೆ ಪೂರ್ಣ

Date:

ಪ್ರತಿನಿತ್ಯ 1 ಲಕ್ಷ ಪ್ರಯಾಣಿಕರು ಸಂಚರಿಸುವ ಯಶವಂತಪುರ ರೈಲ್ವೆ ನಿಲ್ದಾಣವು ಕರ್ನಾಟಕದ ಎರಡನೇ ಅತ್ಯಂತ ಜನನಿಬಿಡ ರೈಲು ನಿಲ್ದಾಣವಾಗಿದೆ. ಬರೋಬ್ಬರಿ ₹380 ಕೋಟಿ ವೆಚ್ಚದಲ್ಲಿ ಈ ನಿಲ್ದಾಣವನ್ನು ಪುನರಾಭಿವೃದ್ಧಿ ಪಡಿಸಲಾಗುತ್ತಿದೆ. ಯಶವಂತಪುರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿಗೆ ಸಂಬಂಧಿಸಿದ ಕೆಲಸಗಳು ಫೆಬ್ರವರಿ 2023ರಿಂದ ಪ್ರಾರಂಭವಾಗಿದೆ. ಜುಲೈ 2025ರಲ್ಲಿ ಪೂರ್ಣಗೊಳ್ಳಲಿದೆ. ಸದ್ಯ ಯಶವಂತಪುರ ರೈಲು ನಿಲ್ದಾಣದ ಮಾರ್ಕೆಟ್ ಭಾಗದಲ್ಲಿ ಎಲಿವೇಟೆಡ್ ರಸ್ತೆಗೆ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಮತ್ತು ರ‍್ಯಾಂಪ್ ನಿರ್ಮಾಣ ಕಾಮಗಾರಿ ವೇಗ ಪಡೆದುಕೊಂಡಿದೆ.

- Advertisement -

“ಹಂತ -1 ರಲ್ಲಿ ಯಶವಂತಪುರ ನಿಲ್ದಾಣದ ಪೂರ್ವ ಭಾಗದಲ್ಲಿ (ಪ್ಲಾಟ್‌ಫಾರ್ಮ್ 1 ಬದಿಯಲ್ಲಿ) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಹಾಗೂ ಪ್ರಯಾಣಿಕರ ಪಿಕ್ ಅಪ್/ಡ್ರಾಪ್‌ಗೆ ಅನುಕೂಲವಾಗುವ ಎಲಿವೇಟೆಡ್ ರಸ್ತೆಗೆ ಸಂಬಂಧಿಸಿದ ನಿರ್ಮಾಣ ಕಾಮಗಾರಿಗಳು ಭರದಿಂದ ಸಾಗಿವೆ. ನಿಲ್ದಾಣದ ಆಗಮನ-ನಿರ್ಗಮನ ದ್ವಾರಗಳು ಪ್ರತ್ಯೇಕವಾಗಿದ್ದು, ಪ್ರಯಾಣಿಕರ ದಟ್ಟಣೆಯಾಗದೆ ಸರಾಗವಾದ ವಾಹನ ಸಂಚಾರಕ್ಕೂ ಕೂಡ ಅನುಕೂಲವಾಗಲಿದೆ” ಎಂದು ನೈಋತ್ಯ ರೈಲ್ವೆ ಮಾಹಿತಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಾಹನಗಳಿಗೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ವ್ಯವಸ್ಥೆ ಇರಲಿದ್ದು, ಇದರಿಂದ ವಾಹನಗಳ ದಟ್ಟಣೆ ತಡೆಯಬಹುದು. ಈ ನಿಲ್ದಾಣವು ಬೃಹತ್ ಗಾತ್ರದ ಏರ್ ಕಾನ್ಕೋರ್ಸ್ (14,800 ಚದರ ಮೀಟರ್ ಗಾತ್ರ) ಹೊಂದಿರಲಿದೆ. ಇದರಲ್ಲಿ ಆಹಾರ ಮಳಿಗೆಗಳು, ವಾಣಿಜ್ಯ ಮಳಿಗೆಯ ಸ್ಥಳ, ವ್ಯಾಪಾರ ಕೇಂದ್ರಗಳು ಸೇರಿದಂತೆ ಇನ್ನಿತರ ಸ್ಥಳಗಳನ್ನು ಒದಗಿಸುವುದರೊಂದಿಗೆ ವಿಮಾನ ನಿಲ್ದಾಣಗಳಲ್ಲಿ ಲೌಂಜ್‌ ಸಮನಾಗಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ” ಎಂದು ತಿಳಿಸಿದೆ.

ಯಶವಂತಪುರ

“ಮಳೆನೀರು ಕೊಯ್ಲು, ಒಳಚರಂಡಿ ನೀರು ಸಂಸ್ಕರಣಾ ಘಟಕಗಳು ಇತ್ಯಾದಿಗಳೊಂದಿಗೆ ಹಸಿರು ಕಟ್ಟಡ ಮಾನದಂಡಗಳ ಪ್ರಕಾರ, ಈ ನಿಲ್ದಾಣವನ್ನು ನಿರ್ಮಿಸಲಾಗುತ್ತಿದೆ. ಇದರ ಜತೆಗೆ ಇಂಧನ ದಕ್ಷತೆಯ ಎಲ್ಇಡಿ ದೀಪಗಳ ಲೈಟಿಂಗ್‌ ಅಳವಡಿಸಲಾಗುವುದು” ಎಂದು ಮಾಹಿತಿ ನೀಡಿದೆ.

“ಹಂತ -1 ಪೂರ್ವ ಭಾಗದಲ್ಲಿ ಕಾಮಗಾರಿ ಪೂರ್ಣಗೊಂಡ ನಂತರ, ಪಶ್ಚಿಮ ಭಾಗದ (ಮೆಟ್ರೋ ಕಡೆಗೆ) ಕೆಲಸ ಪ್ರಾರಂಭವಾಗಲಿದೆ. ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿಯೂ ಜುಲೈ 2025 ರೊಳಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ದೆಹಲಿಯ M/s ಗಿರ್ಧಾರಿ ಲಾಲ್ ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಈ ಕಾಮಗಾರಿಯ ಗುತ್ತಿಗೆಯನ್ನು ಪಡೆದಿದೆ. ಈ ಕಾಮಗಾರಿಯ ಅಂದಾಜು ವೆಚ್ಚ ₹380 ಕೋಟಿ ಇದೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಅಕ್ಟೋಬರ್ 5ರಂದು ಸಾರಿಗೆ ನಿಗಮಗಳ ನೌಕರರ ಪ್ರತಿಭಟನೆ

“ಪುನರಾಭಿವೃದ್ಧಿಪಡಿಸಿದ ನಿಲ್ದಾಣದ 3ಡಿ ಮಾದರಿಯ ಚಿತ್ರವನ್ನು ನಿಲ್ದಾಣದ ಆವರಣದಲ್ಲಿ ಪ್ರದರ್ಶಿಸಲಾಗುತ್ತದೆ. ಪುನರಾಭಿವೃದ್ಧಿಯ ನಂತರ ನಿಲ್ದಾಣವು ಹೇಗಿರಲಿದೆ ಎಂಬುದರ ಒಂದು ನೋಟವನ್ನು ಸೆರೆ-ಹಿಡಿಯಲು ಇಚ್ಚಿಸುವ ಪಾಲುದಾರರು, ವಿದ್ಯಾರ್ಥಿಗಳು, ವಾಸ್ತುಶಿಲ್ಪಿಗಳು ಈ ನಿಲ್ದಾಣಕ್ಕೆ ಭೇಟಿ ನೀಡಿ ಮಾದರಿಯನ್ನು ವೀಕ್ಷಿಸಬಹುದು” ಎಂದು ಹೇಳಿದೆ.  

“ಮಲ್ಟಿ-ಲೆವೆಲ್ ಕಾರ್ ಪಾರ್ಕ್ 6,000 ಚದರ ಮೀಟರ್‌ ಇರಲಿದೆ. ಪೂರ್ವ ಭಾಗದಲ್ಲಿ 90 ದ್ವಿಚಕ್ರ ವಾಹನಗಳು ಮತ್ತು 90 ಕಾರುಗಳ ಪಾರ್ಕ್‌ಗೆ ಅವಕಾಶ ಕಲ್ಪಿಸುತ್ತದೆ. ಪಶ್ಚಿಮ (ಮೆಟ್ರೋ) ಭಾಗದಲ್ಲಿ, ಇದು 35 ಕಾರುಗಳು ಅಥವಾ ಸುಮಾರು 70 ದ್ವಿಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಜತೆಗೆ, 40 ಆಟೋಗಳು/ಕ್ಯಾಬ್‌ಗಳು ಮತ್ತು 50 ದ್ವಿಚಕ್ರ ವಾಹನಗಳ ನಿಲುಗಡೆಗೆ ಸ್ಥಳಾವಕಾಶವಿದೆ” ಎಂದು ಮಾಹಿತಿ ನೀಡಿದೆ.

2022ರ ಜೂನ್‌ನಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಈ ನಿಲ್ದಾಣದ ಪುನರಾಭಿವೃದ್ಧಿಗೆ ತಳಪಾಯ ಹಾಕಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...