ಬೆಂಗಳೂರು | ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನದಲ್ಲಿ ಕನ್ನೇರಿ ಸ್ವಾಮಿ; ಕಾರ್ಯಕ್ರಮದಲ್ಲೇ ಬಸವ ಸಂಘಟನೆಗಳ ಪ್ರತಿಭಟನೆ

Date:

ಲಿಂಗಾಯತರನ್ನು ಹಲವು ಬಾರಿ ದೂಷಿಸಿರುವ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಯನ್ನು ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನಕ್ಕೆ ಆಹ್ವಾನಿಸಿರುವುದನ್ನು ಬಸವ ಸಂಘಟನೆಗಳು ತೀವ್ರವಾಗಿ ವಿರೋಧಿಸಿದೆ. ಸಮಾವೇಶದಲ್ಲೇ ಬಸವ ಸಂಘಟನೆಗಳ 60ಕ್ಕೂ ಅಧಿಕ ಕಾರ್ಯಕರ್ತರು ಪ್ರತಿಭಟಿಸಿ ಕನ್ನೇರಿ ಸ್ವಾಮಿ ವಿರುದ್ಧ ಘೋಷಣೆ ಕೂಗಿದರು.

- Advertisement -

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನ ನಡೆದಿದ್ದು, ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (iLYF) ಕನ್ನೇರಿ ಸ್ವಾಮಿಯನ್ನು ಆಹ್ವಾನಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವಿವಿಧ ಬಸವ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಹಾಗೆಯೇ ಕನ್ನೇರಿ ಸ್ವಾಮಿಯನ್ನು ಬೆಂಗಳೂರಿನಿಂದ ನಿರ್ಬಂಧಿಸಲು ಬೆಂಗಳೂರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಮಹಿಳೆಯರಿಗೆ ಅವಮಾನ ಮಾಡಿದ ಕನ್ನೇರಿ ಸ್ವಾಮಿ; ಸಮರ್ಥನೆ ಮಾಡಿಕೊಂಡ ಜಗದೀಶ್ ಶೆಟ್ಟರ್!

ಕನ್ನೇರಿ ಸ್ವಾಮಿ ಮಾತನಾಡಲು ಆರಂಭಿಸುತ್ತಿದ್ದಂತೆಯೇ ಬಸವ ಭಕ್ತರು ಪ್ರತಿಭಟಿಸಿದ್ದು 15 ನಿಮಿಷ ಭಾಷಣವೇ ನಿಂತಿತ್ತು. ಅಲ್ಲಲ್ಲಿ ಕೂತಿದ್ದ ಸಣ್ಣ ಸಣ್ಣ ಗುಂಪುಗಳು ಒಮ್ಮೆಲೇ ಎದ್ದು ಪ್ರತಿಭಟಿಸಲು ಆರಂಭಿಸಿದ್ದು ಭದ್ರತಾ ಸಿಬ್ಬಂದಿಗಳು ಅವರನ್ನು ತಡೆದು ಹೊರಗೆ ಕಳುಹಿಸಿದರು. ಇನ್ನು ಬಸವ ಸಂಘಟನೆಗಳು ನಿನ್ನೆಯೇ ಪ್ರತಿಭಟನೆಗೆ ಕರೆ ನೀಡಿದ್ದ ಕಾರಣ ಆಯೋಜಕರು ಮೊದಲೇ ತಯಾರಿ ನಡೆಸಿದ್ದರು ಎನ್ನಲಾಗಿದೆ. ಕನ್ನೇರಿ ಸ್ವಾಮಿ ಸುತ್ತಲೂ ಬೌನ್ಸರ್‌ಗಳಿದ್ದರು.

ಈ ಹಿಂದೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದ ಹನುಮ ಮಾಲಾಧಾರಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕನ್ನೇರಿ ಸ್ವಾಮಿ ಹನುಮ ಮಾಲಾಧಾರಣೆ ಹಾಗೂ ಆರ್‌ಎಸ್‌ಎಸ್ ಪದ್ಧತಿಯನ್ನು ವಿರೋಧಿಸುವ ಬಸವ ತತ್ವದ ಅನುಯಾಯಿಗಳು ಮತ್ತು ಕೆಲ ಲಿಂಗಾಯತ ಮಠಾಧೀಶರುಗಳು “ಬಸವ ತಾಲಿಬಾನಿಗಳು” ಎಂದು ಹೇಳಿದ್ದರು. ಹಾಗೆಯೇ ಅಶ್ಲೀಲ ಪದ ಬಳಕೆ ಮಾಡಿದ್ದರು.

ಈ ಹೇಳಿಕೆಗೆ ಬಸವ ಸಂಘಟನೆಗಳು ಮತ್ತು ಲಿಂಗಾಯತ ಸಮಾಜ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕನ್ನೇರಿ ಸ್ವಾಮಿ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ದೂರುಗಳು ದಾಖಲಾಗಿವೆ. ಇನ್ನು ಈಗಾಗಲೇ ಶಾಂತಿ ಕಾಪಾಡುವ ಉದ್ದೇಶದಿಂದ ವಿಜಯಪುರ ಜಿಲ್ಲಾಡಳಿತವು ಕನ್ನೇರಿಗೆ ಸ್ವಾಮಿಗೆ ಜಿಲ್ಲಾ ಪ್ರವೇಶವನ್ನು ಎರಡು ತಿಂಗಳ ಕಾಲ ನಿಷೇಧಿಸಿದೆ.

ಇದನ್ನು ಓದಿದ್ದೀರಾ? ನಾನು ಎಂದೆಂದಿಗೂ ಬಸವಾದಿ ಶರಣರ ಅನುಯಾಯಿ: ಸಿಎಂ ಸಿದ್ದರಾಮಯ್ಯ

ಇನ್ನು ಈ ಕಾರ್ಯಕ್ರಮದಲ್ಲೇ ತನ್ನ ಈ ಹಿಂದೆ ‘ಬಸವ ತಾಲಿಬಾನಿಗಳು’ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕನ್ನೇರಿ ಸ್ವಾಮಿ, “ನಾನು ಈ ಹಿಂದೆ ಇವರು ತಾಲಿಬಾನಿಗಳು ಅಂತ ಹೇಳಿದ್ದೆ. ಆದರೆ ನನಗೆ ಪುರಾವೆ ನೀಡೋಕೆ ಆಗಿರಲಿಲ್ಲ. ಆದರೆ ಈಗ ಪುರಾವೆ ಸಿಕ್ಕಿತು. ಬಸವಣ್ಣನವರ ಹೆಸರು ಹೇಳಿಕೊಂಡು ಇವರು ಮಾಡುವುದು ನೋಡಿದ್ರೆ ನಾಚಿಕೆ ಆಗ್ತದೆ” ಎಂದು ಹೇಳಿಕೊಂಡಿದ್ದಾರೆ.

ಬಸವ ಸಂಘಟನೆಗಳನ್ನು, ಲಿಂಗಾಯತರನ್ನು ಅವಹೇಳನ ಮಾಡಿರುವ ಕನ್ನೇರಿ ಸ್ವಾಮಿ ಅವರನ್ನೇ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನಕ್ಕೆ ಕರೆದಿರುವುದು ತೀವ್ರ ಚರ್ಚೆಯ ವಿಷಯವಾಗಿದೆ. ಈ ವಿಚಾರದಲ್ಲೇ ಆಯೋಜಕರು ಮತ್ತು ಬಸವ ಸಂಘಟನೆಗಳ ನಡುವೆ ಘರ್ಷಣೆ ನಡೆದಿದೆ. “ನಾವು ಕೋಟ್ಯಂತರ ರೂಪಾಯಿ ಹಾಕಿ ಕಾರ್ಯಕ್ರಮ ಮಾಡುತ್ತಿದ್ದೇವೆ. ನಾವೂ ಲಿಂಗಾಯಿತರೇ” ಎಂದು ಆಯೋಜಕರು ಹೇಳಿಕೊಂಡಿದ್ದಾರೆ. “ನೀವು ಲಿಂಗಾಯತರಾಗಿದ್ದರೆ ಬಸವ ದ್ರೋಹಿ ಕನ್ನೇರಿ ಸ್ವಾಮಿಯನ್ನು ಕರೆಸಿದ್ದು ಯಾಕೆ” ಎಂದು ಆಯೋಜಕರನ್ನು ಪ್ರತಿಭಟನಾಕಾರರು ಪ್ರಶ್ನಿಸಿ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...