ಬಿಬಿಎಂಪಿ | ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯಾನ

Date:

ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅ.27 ರಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅ.27 ರಿಂದ ಡಿ.12 ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಭಿಯಾನ ಆರಂಭಿಸಿದೆ.

- Advertisement -

“ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತು ಆನ್‌ಲೈನ್‌ ಮುಖಾಂತರ ಸ್ವಯಂ ಪ್ರೇರಿತವಾಗಿ Web Portal-Voters.eci.gov.in ಅಥವಾ Voter Helpline Mobile App ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ” ಎಂದು ಪಾಲಿಕೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಧ್ವಂಸಗೊಳಿಸಿದ ಆರು ಕಿಡಿಗೇಡಿಗಳ ಬಂಧನ

“ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಮ್ಮಿಕೊಂಡಿರುವ ವಿಶೇಷ ಅಭಿಯಾನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು” ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್‌. ರಾಮಚಂದ್ರನ್ ಅವರು ತಿಳಿಸಿದ್ದಾರೆ.

ನವೆಂಬರ್ 18 (ಶನಿವಾರ), ನವೆಂಬರ್ 19 (ಭಾನುವಾರ), ಡಿಸೆಂಬರ್ 2 (ಶನಿವಾರ), ಡಿಸೆಂಬರ್ 3 (ಭಾನುವಾರ) ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...