ಮಾರ್ಚ್‌ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಸಾಧ್ಯತೆ

Date:

ಲೋಕಸಭೆ ಚುನಾವಣೆಗೆ ಮುನ್ನವೇ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ತಯಾರಿ ನಡೆಸುತ್ತಿದೆ.

- Advertisement -

ಮಾರ್ಚ್ ಮೊದಲ ವಾರ ಆಯವ್ಯಯ ಮಂಡನೆಗೆ ಪಾಲಿಕೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಏಕೆಂದರೆ, ಏಪ್ರಿಲ್ ಇಲ್ಲವೇ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾದರೆ ಚುನಾವಣೆ ಕೆಲಸಗಳಿಗೆ ಬಿಬಿಎಂಪಿ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಹೀಗಾಗಿ, ಚುನಾವಣೆಗೂ ಮುನ್ನವೇ ಬಜೆಟ್ ಮಂಡನೆ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಜೆಟ್ ಮಂಡನೆಗಾಗಿ ಪಾಲಿಕೆಯ ಹಣಕಾಸು ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. 2024-25 ನೇ ಸಾಲಿನಲ್ಲಿ ಕೈಗೊಳ್ಳುವ ಕಾಮಗಾರಿ ಯೋಜನೆ ಪಟ್ಟಿ ಹಾಗೂ ಅಂದಾಜು ವೆಚ್ಚದ ವಿವರ ನೀಡುವಂತೆ ಆದೇಶಿಸಲಾಗಿದೆ.

ಬಿಬಿಎಂಪಿಗೆ ಚುನಾವಣೆ ನಡೆದು ನಾಲ್ಕು ವರ್ಷಗಳು ಮುಗಿಯುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳೇ ನಾಲ್ಕನೇ ಬಾರಿಗೆ ಬಿಬಿಎಂಪಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಪಾಲಿಕೆಯಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ ಬಿಬಿಎಂಪಿಯ ಹಣಕಾಸು ವಿಭಾಗದ ಮುಖ್ಯಸ್ಥರೇ ಬಜೆಟ್ ಮಂಡಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ ಆಹಾರದಲ್ಲಿ ಜಿರಳೆ ಪತ್ತೆ: ಪ್ರಶ್ನಿಸಿದ್ದಕ್ಕೆ ಹೈಕೋರ್ಟ್‌ ವಕೀಲೆ ಮೇಲೆ ಹಲ್ಲೆ

ಇನ್ನೂ 2023-24 ನೇ ಸಾಲಿನಲ್ಲಿ ಸರ್ಕಾರದ ಅನುದಾನದಲ್ಲಿ ಕೈಗೊಂಡ ಸಾಧನೆ ಪಟ್ಟಿ ಸಲ್ಲಿಕೆಗೂ ಸೂಚನೆ ನೀಡಲಾಗಿದ್ದು, ಎರಡು ದಿನಗಳಲ್ಲಿ ಎಲ್ಲ ವಲಯಗಳ ಮಾಹಿತಿ ಸಂಗ್ರಹಿಸಿ ಆನ್ ಲೈನ್ ಮುಖಾಂತರ ಸಲ್ಲಿಸುವಂತೆ ಅಧಿಕಾರಿಗಳಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...