ಬೆಂಗಳೂರು | ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆರವಿಗೆ ಪಾಲಿಕೆ ಆಯುಕ್ತರ ಸೂಚನೆ

Date:

  • ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲು
  • ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ

ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ತೆಗೆಯುವಂತೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ, ವಲಯ ಜಂಟಿ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಬುಧವಾರ ವರ್ಚುವಲ್ ಸಭೆ ನಡೆಸಿ ಅವರು ಮಾತನಾಡಿದರು. “ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಭಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಯಾರಾದರು ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು” ಎಂದರು.

“ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರೆ, ಅದನ್ನು ತಕ್ಷಣ ರದ್ದುಪಡಿಸಬೇಕು. ಚುನಾವಣೆ ಮುಗಿಯುವವರೆಗೆ ಯಾವುದೇ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ. ಇದ್ದರೆ ಕೂಡಲೇ ಅವುಗಳನ್ನು ತೆಗೆಯುವುದು ಅಥವಾ ಬಟ್ಟೆಯ ಮೂಲಕ ಕಾಣದಂತೆ ಮುಚ್ಚಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾ. 29ರ ರಾತ್ರಿ ಐತಿಹಾಸಿಕ ಕರಗ ಶಕ್ತ್ಯೋತ್ಸವದ ಅದ್ದೂರಿ ರಥೋತ್ಸವ

“ರಸ್ತೆ ಬದಿಯಿರುವ ನಾಮಫಲಕಗಳಲ್ಲಿರುವ ಜನಪ್ರತಿನಿಧಿಗಳ ಹೆಸರುಗಳನ್ನು ತೆಗೆಯಬೇಕು. ಎಲ್ಲೂ ಜನಪ್ರತಿನಿಧಿಗಳ ಹೆಸರಾಗಲಿ, ಸಂಪರ್ಕ ಸಂಖ್ಯೆಯಾಗಲಿ ಇರುವಂತಿಲ್ಲ” ಎಂದರು.

ಪ್ರಗತಿಯಲ್ಲಿರುವ ಕಾಮಗಾರಿಗಳ ಪಟ್ಟಿ ಕೇಳಿದ ಮುಖ್ಯ ಆಯುಕ್ತರು

“ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳ ವ್ಯಾಪ್ತಿಯಲ್ಲಿ ಯೋಜನಾ ವಿಭಾಗ, ಕೆರೆಗಳ ವಿಭಾಗ, ರಾಜಕಾಲುವೆ ವಿಭಾಗ ಸೇರಿದಂತೆ ಇನ್ನಿತರೆ ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳ ಪಟ್ಟಿಯನ್ನು ಕೂಡಲೆ ನೀಡಬೇಕು” ಎಂದು ಅಧಿಕಾರಿಗಳಿಗೆ ಹೇಳಿದರು.

“ಈಗಾಗಲೇ ಕಾರ್ಯಾದೇಶ ನೀಡಿ ಕೆಲಸ ಪ್ರಾರಂಭಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು. ಹೊಸದಾಗಿ ಟೆಂಡರ್ ಕರೆಯುವುದಾಗಲಿ, ಹೊಸದಾಗಿ ಕಾರ್ಯಾದೇಶ ನೀಡುವುದಾಗಲಿ ಮಾಡುವಂತಿಲ್ಲ. ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸುವುದು ಕಂಡಬಂದರೆ ಚುನಾವಣಾ ಆಯೋಗದಿಂದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತರಾದ ಉಜ್ವಲ್ ಕುಮಾರ್ ಘೋಷ್, ಜಯರಾಮ ರಾಯಪುರ, ಎಲ್ಲ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಫಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ...

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ...