ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ನಂದೀಶ್‌ ರೆಡ್ಡಿ ವಿರುದ್ಧ ಬಿಬಿಎಂಪಿ ದೂರು

Date:

  • ರಾಜಧಾನಿಯಲ್ಲಿ ಇನ್ನೂ 700ಕ್ಕೂ ಹೆಚ್ಚು ಕಡೆ ಒತ್ತುವರಿ ತೆರವು ಬಾಕಿ
  • ತೆರವು ಕಾರ್ಯಾಚರಣೆ ವೇಳೆ ಜೆಸಿಬಿ ಮೇಲೆ ಹತ್ತಿ ಬೀಗ ಕಿತ್ತುಕೊಂಡ ಮಾಜಿ ಶಾಸಕ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ದೊಡ್ಡನೆಕ್ಕುಂದಿಯ ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಐಷಾರಾಮಿ ಕ್ಲಬ್ ಹೌಸ್ ಮತ್ತು ಈಜುಕೊಳ ನಿರ್ಮಾಣ ಮಾಡಲಾಗಿದೆ. ಇದರ ತೆರವು ಕಾರ್ಯಾಚರಣೆಗೆ ಮಾಜಿ ಶಾಸಕ ನಂದೀಶ್ ರೆಡ್ಡಿ ಅಡ್ಡಿಪಡಿಸಿದ್ದು, ಇವರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದೂರು ದಾಖಲು ಮಾಡಲು ಮುಂದಾಗಿದೆ.

- Advertisement -

ಸೋಮವಾರ ಬೆಂಗಳೂರಿನ ದೊಡ್ಡನೆಕ್ಕುಂದಿಯ ಫರ್ನ್‌ಸಿಟಿ ಲೇಔಟ್‌ನಲ್ಲಿ ಬಿಬಿಎಂಪಿ ಅಧಿಕಾರಿಗಳು ಗುರುತು ಮಾಡಿದ್ದ ರಾಜಕಾಲುವೆ ಒತ್ತುವರಿ ಸ್ಥಳಕ್ಕೆ ಬುಲ್ಡೋಜರ್ ಸಮೇತ ತೆರಳಿ, ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಒತ್ತುವರಿ ತೆರವು ವೇಳೆ, ಬಿಬಿಎಂಪಿ ಅಧಿಕಾರಿಗಳಿಗೆ ಬಿಜೆಪಿ ನಾಯಕ ನಂದೀಶ್​ ರೆಡ್ಡಿ ತೆರವು ಮಾಡದಂತೆ ತಡೆದಿದ್ದು, ಏರು ಧ್ವನಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದ್ದೀರಿ ಎಂದು ಜೆಸಿಬಿ ಮೇಲೆ ಹತ್ತಿ ಬೀಗ ಕಿತ್ತುಕೊಂಡಿದ್ದಾರೆ. “ಜೆಸಿಬಿ ಮುಂದೆ ಅಡ್ಡ ಕೂರುತ್ತೇನೆ. ತೆರವು ಮಾಡಿ” ಎಂದು ಸವಾಲು ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಸೋಮವಾರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ಬಿಬಿಎಂಪಿ ಅಧಿಕಾರಿಗಳ ಕೆಲಸಕ್ಕೆ ನಂದೀಶ್ ರೆಡ್ಡಿ ಅವರು ಅಡ್ಡಿಪಡಿಸಿದ್ದಾರೆ. ಅವರ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸ್ಥಳೀಯ ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜಕಾಲುವೆ ಒತ್ತುವರಿ ತೆರವಿಗೆ ಯಾರೇ ಅಡ್ಡಿಪಡಿಸಿದರೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” ಎಂದರು.

“ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಮಹದೇವಪುರ ವಲಯದ ನಾನಾ ಕಡೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಮಳೆ ಸ್ಥಿತಿಗತಿ ನೋಡಿಕೊಂಡು ಕಾರ್ಯಾಚರಣೆ ನಡೆಸುತ್ತೇವೆ. ಮಳೆಯಲ್ಲಿ ಸರಿಯಾಗಿ ಒತ್ತುವರಿಯಾಗಿರುವ ಜಾಗವನ್ನು ಗುರುತು ಮಾಡಿ ತೆರವು ಮಾಡುವುದು ಕಷ್ಟವಾಗಲಿದೆ” ಎಂದು ಹೇಳಿದರು.

“ರಾಜಕಾಲುವೆ ಪಕ್ಕದಲ್ಲಿಯೇ ತೆರವು ಕಾರ್ಯ ಮಾಡಬೇಕು. ಈ ವೇಳೆ, ಕಟ್ಟಡ ಕೆಡವುವಾಗ ಆ ಸ್ಥಳದಲ್ಲಿ ಬಿದ್ದ ತ್ಯಾಜ್ಯದಿಂದ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತದೆ. ಹಾಗಾಗಿ, ತೆರವು ಕಾರ್ಯ ಸ್ಥಗಿತ ಮಾಡಲಾಗಿದೆ. ಮಳೆಯ ಸ್ಥಿತಿಗತಿ ಪರಿಶೀಲನೆ ಮಾಡಿಕೊಂಡು ಒತ್ತುವರಿ ತೆರವು ಕಾರ್ಯ ಮಾಡುತ್ತೇವೆ” ಎಂದು ತಿಳಿಸಿದರು.

ಕಳೆದ ವರ್ಷ ಸುರಿದ ಭಾರೀ ಮಳೆಗೆ ನಗರದ ರೈನ್‌ ಬೋ ಸಿಟಿ, ಸರ್ಜಾಪುರ ರಸ್ತೆ, ಸಾಯಿ ಲೇಔಟ್, ಮಹದೇವಪುರ ಸೇರಿದಂತೆ ಹಲವೆಡೆ ಪ್ರವಾಹವಾಗಿತ್ತು. ಇದಕ್ಕೆ ರಾಜಕಾಲುವೆ ಒತ್ತುವರಿ ಕಾರಣ ಎಂದು ಬಿಬಿಎಂಪಿ ಹೇಳಿತ್ತು. ಅದರಂತೆಯೇ ನಗರದಲ್ಲಿ 700ಕ್ಕೂ ಹೆಚ್ಚು ಕಡೆ ಒತ್ತುವರಿ ಪ್ರದೇಶಗಳನ್ನು ಗುರುತು ಮಾಡಲಾಗಿತ್ತು. ಕಳೆದ ವರ್ಷವೇ ಒತ್ತುವರಿ ತೆರವು ಕಾರ್ಯಚರಣೆ ಆರಂಭವಾಗಿತ್ತು. ಆದರೆ, ಕೇವಲ ಒಂದು ತಿಂಗಳು ಮಾತ್ರ ನಗರದಲ್ಲಿ ಬುಲ್ಢೋಜರ್ ಸದ್ದು ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಈಜುಕೊಳ ತೆರವು

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಗರದಲ್ಲಿ ಪ್ರತಿ ಒತ್ತುವರಿಗಳನ್ನು ತೆರವು ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದರು. ರಾಜಧಾನಿಯಲ್ಲಿ ಇನ್ನೂ 700ಕ್ಕೂ ಹೆಚ್ಚು ಕಡೆ ಒತ್ತುವರಿ ತೆರವು ಮಾಡುವುದು ಬಾಕಿ ಉಳಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...