ಬಿಬಿಎಂಪಿ ಅಗ್ನಿ ಅವಘಡ | ಚಿಕಿತ್ಸೆ ಫಲಿಸದೆ ಮುಖ್ಯ ಎಂಜಿನಿಯರ್ ಶಿವಕುಮಾರ್ ಸಾವು

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣಮಟ್ಟ ನಿಯಂತ್ರಣ ಮತ್ತು ಪ್ರಯೋಗಾಲಯದ ವಿಭಾಗದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಸಾವನ್ನಪ್ಪಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣನಿಯಂತ್ರಣ ಮತ್ತು ಪ್ರಯೋಗಾಲಯ ವಿಭಾಗದಲ್ಲಿ ಆಗಸ್ಟ್‌ 11ರಂದು ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿತ್ತು. ಈ ದುರಂತದಲ್ಲಿ 9 ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡವರಲ್ಲಿ ಮುಖ್ಯ ಎಂಜಿನಿಯರ್‌ ಶಿವಕುಮಾರ್ ಮತ್ತು ಜ್ಯೋತಿ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದವು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸ್ಫೋಟ ಸಂಭವಿಸಿದ ಬಳಿಕ ಪ್ರಯೋಗಾಲಯದ ಒಳಗೆ ಬೆಂಕಿ ತೀವ್ರವಾಗಿ ಕಾಣಿಸಿಕೊಂಡಿದೆ. ಈ ವೇಳೆ, ಒಳಗಿದ್ದವರು ಹೊರಗೆ ಬರುವುದಕ್ಕೂ ಹರಸಾಹಸ ಪಡಬೇಕಾಯಿತು. ಹೊರಗೆ ಬಂದವರು ಬೆಂಕಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಗ್ನಿ ಅವಘಡ | ಕತ್ತಲಾದ ಜ್ಯೋತಿಯ ಬಾಳಿಗೆ ಜೀವ ತುಂಬಲು ಮುಂದಾದ ಪಾಲಿಕೆ

ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡದಿಂದ ಒಟ್ಟು 9 ಮಂದಿಗೆ ಗಾಯವಾಗಿದೆ. ಈ ಪೈಕಿ 2 ಮಹಿಳೆಯರು, 7 ಪುರುಷರಿಗೆ ಗಾಯವಾಗಿದೆ. ಮುಖ್ಯ ಅಭಿಯಂತರರಾದ ಶಿವಕುಮಾರ್ ಅವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಲಾಗಿತ್ತು. ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು ಎಂದು ಬಿಬಿಎಂಪಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ʼಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರುʼ ರಚನೆ : ಅಧ್ಯಕ್ಷರಾಗಿ ಶಬೀರ್‌ ಬ್ರಿಗೇಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...